ಕೆ.ಎಸ್.ಎಸ್ ಕಾಲೇಜಿನಲ್ಲಿ ಎನ್.ಎಸ್.ಎಸ್ ಚಟುವಟಿಕೆಗಳ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಆ.12ರಂದು ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

. . . . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ ವಹಿಸಿದ್ದರು. ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ಎನ್.ಎಸ್.ಎಸ್ ಅಧಿಕಾರಿ ಹಾಗೂ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಮಹೇಶ್ ಕುಮಾರ್ ಶೆಟ್ಟಿ ಅವರು ಉದ್ಘಾಟಿಸಿ ಎನ್ಎಸ್ಎಸ್ ನ ಪ್ರಾಮುಖ್ಯತೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

. . . . . . .

ಎನ್ಎಸ್ಎಸ್ ಘಟಕದ ಕಾರ್ಯಕ್ರಮ ಅಧಿಕಾರಿ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಶ್ರೀಮತಿ ಶ್ರೀಲತಾ ಕಮಿಲಾ ಮತ್ತು ಹಿರಿಯ ಎನ್.ಎಸ್.ಎಸ್ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀಮತಿ ಸುಮಿತ್ರ ಸ್ವಾಗತಿಸಿದರು. ಎನ್ಎಸ್ಎಸ್ ಘಟಕದ ನಾಯಕಿ ಹರ್ಷಿತ ವಂದಿಸಿದರು. ವರ್ಷಿಣಿ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading