ಕೊಲ್ಲಮೊಗ್ರು : ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ರಸ್ತೆಯಲ್ಲಿ ಪ್ಲಾಸ್ಟಿಕ್ ಹಾಗೂ ಮದ್ಯದ ಬಾಟಲ್‌ಗಳು ; ನೈರ್ಮಲ್ಯ ಕಾಪಾಡಲು ಸಾರ್ವಜನಿಕರ ಆಗ್ರಹ..!

ಕೊಲ್ಲಮೊಗ್ರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವ ಮುಖ್ಯ ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ವಸ್ತುಗಳು ಹಾಗೂ ಮದ್ಯದ ಬಾಟಲಿಗಳು ಬಿದ್ದಿದ್ದು, ಆರೋಗ್ಯ ಕಾಪಾಡುವ ಕೇಂದ್ರದ ದಾರಿಯಲ್ಲೇ ಅನಾರೋಗ್ಯಕರ ವಾತಾವರಣ ಸೃಷ್ಟಿಯಾಗಿರುವುದು ಕಂಡುಬಂದಿದೆ. ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾದಾಗ ಮೊದಲು ಧಾವಿಸುವುದು ಸಮೀಪದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ. ಆದರೆ, ಅಂತಹ ಆರೋಗ್ಯ ಕೇಂದ್ರಕ್ಕೆ ತೆರಳುವ ರಸ್ತೆ ಬದಿಯಲ್ಲೇ ಈ ರೀತಿ ಅನಾರೋಗ್ಯಕರ ವಸ್ತುಗಳನ್ನು ಎಸೆದು ಪರಿಸರ ಮಾಲಿನ್ಯ ಮಾಡುತ್ತಿರುವುದು ಮತ್ತು ಶುಚಿಯಾದ ವಾತಾವರಣವನ್ನು ಹಾಳುಗೆಡವುತ್ತಿರುವುದು ಖಂಡನೀಯವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಸ್ಥಳೀಯಾಡಳಿತವು ಈ ಕೂಡಲೇ ಇತ್ತ ಗಮನಹರಿಸಿ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವ ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ವಸ್ತುಗಳು, ಕಸ ಹಾಗೂ ಮದ್ಯದ ಬಾಟಲಿಗಳನ್ನು ತೆರವುಗೊಳಿಸಿ ಸುಂದರ ವಾತಾವರಣವನ್ನು ನಿರ್ಮಿಸಬೇಕಾಗಿದೆ. ಜೊತೆಗೆ ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಸೂಕ್ತ ಜಾಗೃತಿ ಫಲಕಗಳನ್ನು ಅಳವಡಿಸಿ ಎಚ್ಚರಿಕೆ ವಹಿಸಬೇಕಿದೆ. ಅದೇ ರೀತಿ ಆಸ್ಪತ್ರೆ ಸೇರಿದಂತೆ ಊರಿನಲ್ಲಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಸ್ವಚ್ಛವಾಗಿ ಹಾಗೂ ಸುಂದರವಾಗಿ ಇರಿಸಿಕೊಳ್ಳುವುದು ಸಾರ್ವಜನಿಕರ ಆದ್ಯ ಕರ್ತವ್ಯವಾಗಿದೆ ಎಂಬುದನ್ನು ಪ್ರತಿಯೊಬ್ಬರೂ ನೆನಪಿನಲ್ಲಿಡಬೇಕಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading