ಬಾಳಿಲ ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳು ಬಾಳಿಲದಲ್ಲಿ ಸ್ವತಂತ್ರ ದಿನಾಚರಣೆಯು ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯು ವಿಜೃಂಭಣೆಯಿಂದ ಜರುಗಿತು. ಶಾಲಾ ಸಂಚಾಲರಾದ ಪಿ.ಜಿ.ಎಸ್.ಎನ್ ಪ್ರಸಾದ್ ಧ್ವಜರೋಹಣ ಮಾಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕೃಷಿ ರತ್ನ ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕರಾದ ಟಿ.ಆರ್ ಸುರೇಶ್ಚಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ವಿವರಿಸಿ ಸ್ವಾವಲಂಬಿ ಜೀವನದ ಪ್ರಾಧಾನ್ಯತೆಯನ್ನು ವಿವರಿಸಿದರು. ಶಾಲಾ ಸಂಚಾಲಕರು ಮಾತನಾಡಿ ನಿಜವಾದ ಸ್ವಾತಂತ್ರ್ಯವನ್ನು ಯಾವ ರೀತಿ ಅನುಭವಿಸಬೇಕು ಎಂದು ವಿವರಿಸಿ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ವಿಭಾಗದ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಪ್ರೌಢ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಹರಿಣಾಕ್ಷಿ ಬರೆಮೇಲು, ಪ್ರಾಥಮಿಕ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸೀತಾರಾಮ ಕಾಯಾರ ಮತ್ತು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ರಮೇಶ್ ಕಾಚಿಲ ಮತ್ತು ವಿದ್ಯಾಬೋಧಿನೀ ಎಜುಕೇಷನಲ್ ಸೊಸೈಟಿಯ ಕೋಶಾಧಿಕಾರಿ ರಾಮ್ ಭಟ್ ಕೈಂತಜೆ ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು. ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಯು.ರಾಧಾಕೃಷ್ಣ ರಾವ್ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಎಲ್ಲ ರಿಗೂ ಶುಭಾಶಯಗಳನ್ನು ಹಾರೈಸಿದರು. ಶಾಲಾ ಮುಖ್ಯ ಗುರುಗಳಾದ ಉದಯಕುಮಾರ್ ರೈ.ಎಸ್ ಸ್ವಾಗತಿಸಿದರು. ಸಹ ಶಿಕ್ಷಕಿ ಸಹನಾ ಬಿ.ಬಿ ವಂದಿಸಿದ ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಸಾಯಿ ಸುನಿಷ್ಕ ಮತ್ತು ಹವ್ಯಶ್ರೀ ನಿರ್ವಹಿಸಿದರು. ಕಳಂಜ ಬಾಳಿಲ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಎಲ್ಲರಿಗೂ ಸಿಹಿಯನ್ನು ವಿತರಿಸಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading