ಹರಿಹರ ಪಳ್ಳತ್ತಡ್ಕ : ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಹರಿಹರ ಪಳ್ಳತ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ವೆಂಕಟೇಶ್ ನಾಯ್ಕ್ ವಿದ್ಯಾರ್ಥಿಗಳಿಗೆ ದೇಶಭಕ್ತಿ ಬಗ್ಗೆ ತಿಳಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. 10ನೇ ತರಗತಿ ವಿದ್ಯಾರ್ಥಿನಿ ದೀಪ್ತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪದ್ಮನಾಭ ಕಲ್ಕುದಿ, ಶಾಲಾ ಮುಖ್ಯ ಶಿಕ್ಷಕರಾದ ವೆಂಕಟೇಶ್ ನಾಯ್ಕ್, ದೈಹಿಕ ಶಿಕ್ಷಣ ಶಿಕ್ಷಕರಾದ ಮೇದಪ್ಪ, ಸಹ ಶಿಕ್ಷಕರಾದ ಕೃಪಾ.ಪಿ.ಎಸ್, ಜಯಶ್ರೀ.ಕೆ ಗುಡ್ಡೆಮನೆ, ಶಿವಾಜಿ.ಕೆ, ಪ್ರಿಯಾ.ಬಿ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಅಡುಗೆ ಸಿಬ್ಬಂದಿಯವರು ಉಪಸ್ಥಿತರಿದ್ದರು. ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading