ಕೊಲ್ಲಮೊಗ್ರು : ಕೆವಿಜಿ ಅನುದಾನಿತ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರದ ಕೆವಿಜಿ ಅನುದಾನಿತ ಪ್ರೌಢಶಾಲೆ ಎ.ಓ.ಎಲ್.ಇ(ರಿ.)ಯಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೆರವಣಿಗೆಯೊಂದಿಗೆ ಆಚರಿಸಲಾಯಿತು. ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದೆವು. ಈ ಸಂದರ್ಭದಲ್ಲಿ ವರ್ಷಂಪ್ರತಿಯಂತೆ ದಿ.ಜನಾರ್ಧನ ಗೌಡ ಮಲ್ಲಾರ ಅವರ ಸ್ಮರಣಾರ್ಥ 10ನೇ ತರಗತಿಯಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಅತಿಹೆಚ್ಚು ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳಿಗೆ ದತ್ತಿನಿಧಿ ಯೋಜನೆಯ ನಗದು ಬಹುಮಾನ ವಿತರಿಸಲಾಯಿತು. ನಂತರ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ ನಡೆದು ಸಿಹಿತಿಂಡಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕಮಲಾಕ್ಷ ಗೌಡ ಮುಳ್ಳುಬಾಗಿಲು, ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಶ್ರೀಮತಿ ತೇಜಾವತಿ ಅಂಬೆಕಲ್ಲು, ವಿದ್ಯಾರ್ಥಿಗಳು, ಪೋಷಕರು, ತಾಯಂದಿರ ಸಮಿತಿಯ ಸದಸ್ಯರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಸಿಬ್ಬಂದಿವರ್ಗ ಹಾಗೂ ಅಕ್ಷರ ದಾಸೋಹ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading