ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾಂತಂತ್ರ್ಯ ದಿನಾಚರಣೆ

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನಲ್ಲಿ ಆ.15ರಂದು 80ನೇ ಸ್ವಾಂತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ.ಡಿ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ “ನಮಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಗಾಂಧೀಜಿಯವರು ಹಾಗೂ ಸ್ವಾತಂತ್ರ್ಯಕ್ಕಾಗಿ ದುಡಿದ ಮಹನೀಯರುಗಳು, ಸೇನಾನಿಗಳನ್ನು ನಾವು ಸ್ಮರಿಸಿಕೊಳ್ಳುವುದು ಅತ್ಯವಶ್ಯ. ಗಾಂಧೀಜಿಯವರ ಸರಳತೆ ಹಾಗೂ ಆದರ್ಶ ಗುಣಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ರೂಡಿಸಿಕೊಳ್ಳೋಣ. ಭಾರತ ದೇಶವು ಸ್ವಾತಂತ್ರ್ಯ ಸಿಕ್ಕಿದಾಗ ಇದ್ದಂತಹ ಬಡತನ, ಆಹಾರ ಸಮಸ್ಯೆ, ನೀರಿನ ಸಮಸ್ಯೆ, ನಿರುದ್ಯೋಗ, ಇತ್ಯಾದಿಗಳು ಎಂಟು ದಶಕಗಳ ನಂತರ ಬಹುತೇಕ ನಿವಾರಣೆಗೊಂಡು ಇಂದು ನಾವು ವಿಶ್ವದಲ್ಲಿ ಬಲಿಷ್ಠ ರಾಷ್ಟ್ರವಾಗಿ ಬೆಳೆದು ಬಂದಿದ್ದೇವೆ. ನಮ್ಮ ಆಚಾರ, ವಿಚಾರ, ಸಂಸ್ಕೃತಿಯನ್ನು ಉಳಿದ ದೇಶಗಳು ಕೂಡ ನಮ್ಮತ್ತ ಬೊಟ್ಟು ಮಾಡಿ ನೋಡುವಂತಾಗಿದೆ.” ಎಂದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ನಿವೃತ್ತ ಉಪನ್ಯಾಸಕ ಡಾ. ಕೆ.ಎಸ್.ಎನ್ ಉಡುಪ ಅವರು “ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದಾಗಿನಿಂದ ಇಲ್ಲಿಯವರೆಗೆ ಚಿತ್ರಣವನ್ನ ವಿವರವಾಗಿ ವಿವರಿಸಿದ್ದರು.” ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟೇಶ ಎಚ್.ಎಲ್, ಉಪಾಧ್ಯಕ್ಷರಾದ ದುಗ್ಗಪ್ಪ ನಾಯ್ಕ್, ಕಡಬ ತಾಲ್ಲೂಕು ಕೆ.ಡಿ.ಪಿ ಸದಸ್ಯ ಶಿವರಾಮ ರೈ, ಕೃಷ್ಣಮೂರ್ತಿ ಭಟ್, ವಿಶ್ವನಾಥ ನಡುತೋಟ, ರವೀಂದ್ರ ಕುಮಾರ್ ರುದ್ರಪಾದ, ದೀಪಕ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಸದಸ್ಯರು, ವಿವಿಧ ಸಂಘಗಳ ಪದಾಧಿಕಾರಿಗಳು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading