ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಕೆವಿಜಿ : ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 80ನೇ ವರ್ಷದ ಸ್ವಾತಂತ್ರತ್ರ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಗಸ್ಟ್ 15ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದರವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರತ್ರ್ಯೋತ್ಸವದ ಸಂದೇಶವನ್ನು ಸಾರಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಆದ ಅಕ್ಷಯ್ ಕೆ.ಸಿ, ಕೌನ್ಸಿಲ್ ಮೆಂಬರ್ ಜಗದೀಶ ಅಡ್ತಲೆ, A.O.L.E.(R.) ಇದರ ಮೆಂಬರ್ ಸದಸ್ಯರುಗಳು, ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಆಡಳಿತಾಧಿಕಾರಿಯಾದ ದಾಮೋದರ ಗೌಡ, ನೆಹರು ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿಯಾದ ಚಂದ್ರಶೇಖರ ಪೇರಾಲ್, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ವಿನಯ ಶಂಕರ್ ಭಾರಧ್ವಾಜ್ ಬಿ, ಸಂಸ್ಥೆಯ ಎನ್.ಎಸ್.ಎಸ್., ಯೋಜನಾಧಿಕಾರಿ ಡಾ. ಪ್ರಮೋದ್ ಪಿ.ಎ, ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು ಹಾಗೂ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading