ಮರ್ದೂರಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ

ಮರ್ದೂರಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಜಯಪ್ರಕಾಶ್ ಬಲ್ಕಾಡಿ ಧ್ವಜಾರೋಹಣ ನೆರವೇರಿಸಿದರು. ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿದ್ಯಾ ಅಭಿಮಾನಿಗಳು ಸೇರಿ ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಆನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ಬಾಲಕೃಷ್ಣ ಮರ್ದೂರು, ಕೃಷಿಕರಾದ ಅಶೋಕ್ ರೈ ಮರ್ದೂರು, ನಿವೃತ್ತಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲೋಕೇಶ್ವರಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗೀತಾ ರೈ ಉಪಸ್ಥಿತರಿದ್ದರು. ಮಕ್ಕಳಿಗೆ ಛದ್ಮವೇಶ ಸ್ಪರ್ಧೆ, ದೇಶ ಭಕ್ತಿ ಗೀತೆ, ಭಾಷಣ ಏರ್ಪಡಿಸಲಾಯಿತು.

. . . . . . . . .

ಮಧ್ಯಾಹ್ನದ ಬಿಸಿ ಊಟದೊಂದಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು.

. . . . . . .

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಶಿಕ್ಷಕ ವೃಂದದವರು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಪುಟಾಣಿಗಳು ಉಪಸಿತರಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಭವ್ಯ ಬಿ ಸ್ವಾಗತಿಸಿದರು. ಗೌರವ ಶಿಕ್ಷಕಿ ಶ್ರೀಮತಿ ಗಾಯತ್ರಿ ವಂದಿಸುವುದರೊಂದಿಗೆ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading