ಶೇಣಿ : 80ನೇ ಸ್ವಾತಂತ್ರ್ಯೋತ್ಸವ ; “ಮಕ್ಕಳಿಗೆ ಸ್ವಾತಂತ್ರ್ಯ ಮುಖ್ಯ” – ರಾಮಕೃಷ್ಣ ಭಟ್ ಚೂಂತಾರು

“ಮಕ್ಕಳಿಗೆ ಅವರ‌ ಕೆಲವೊಂದು ಸಣ್ಣಪುಟ್ಟ ಕೆಲಸಗಳಿಗೆ ಅವಕಾಶ ಕೊಡಿ. ಮಕ್ಕಳೊಂದಿಗೆ ಮಾತನಾಡಿ, ಒಳ್ಳೆಯ ಕೆಲಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ. ಕೇವಲ ಪಠ್ಯ ಚಟುವಟಿಕೆಗಳಿಗೆ ಪೂರಕವಾಗಿ ಇಡಬೇಡಿ. ಇದರಿಂದ ಮಕ್ಕಳಲ್ಲಿ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ” ಎಂದು ಬೆಳಾಲು ಪ್ರೌಢ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೂಂತಾರು ಹೇಳಿದರು.

. . . . . . . . .

ಅವರು ಶೇಣಿ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ 80ನೇ ವರ್ಷದ ಸ್ವಾತಂತ್ರ್ಯೋತ್ಸವದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪೋಷಕರಿಗೆ ಕಿವಿಮಾತು ಹೇಳಿದರು.

. . . . . . .

ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಶಾಂತ್ ಪಾಡಾಜೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶೇಣಿ ಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ಲೋಕನಾಥ್, ನಾಳೆ ನಿರ್ದೇಶಕ ಸದಸ್ಯ ಮಾಧವ ಗೌಡ ಪಿಂಡಿಬನ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಶ್ರೀಮತಿ ಸೌಮ್ಯ, ಶಾಲಾ ಮುಖ್ಯ ಶಿಕ್ಷಕರಾದ ವಿನಯ್ ಪ್ರಸಾದ್.ಟಿ ಉಪಸ್ಥಿತರಿದ್ದರು. ಶಾಲಾ ಮಕ್ಕಳಿಂದ ಸ್ವಾತಂತ್ರ್ಯೋತ್ಸವದ ಬಗ್ಗೆ ಭಾಷಣ ಮಾಡಿದರು. ಶ್ರೀಮತಿ ಬೇಬಿ ಮೋಟುಕಾನ ಸ್ವಾಗತಿಸಿ, ಶ್ರೀಮತಿ ಕೋಮಲಾಕ್ಷಿ ವಂದಿಸಿದರು. ಶ್ರೀಮತಿ ಭವ್ಯ ಸಿ. ಕಾರ್ಯಕ್ರಮ ನಿರೂಪಿಸಿದರು. ಮಕ್ಕಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಶಾಂತ್ ಪಾಡಾಜೆ ಧ್ವಜಾರೋಹಣ ನೆರವೇರಿಸಿದರು. ಶೇಣಿ ಪರಿಸರದಲ್ಲಿ ಜಾಥಾ ನಡೆಸಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading