ಆಟಿ ಪ್ರಕೃತಿಯೊಂದಿಗೆ ಹೇಗೆ ಜೀವಿಸಬೇಕು ಎಂಬುದನ್ನು ತಿಳಿಸುತ್ತದೆ: ರಮಾ ವೈ.ಕೆ.

ಸುಳ್ಯ: ಆಟಿ ತಿಂಗಳು ಪ್ರಕೃತಿಯೊಂದಿಗೆ ಹೊಂದಿಕೊಂಡು ಹೇಗೆ ಬದುಕಬೇಕು ಎಂಬುದನ್ನು ತಿಳಿಸುವ ಕಾಲಘಟ್ಟವಾಗಿದೆ. ಪ್ರಕೃತಿಯು ನಮಗೆ ಯಾವ ಆಹಾರ ಸೇವಿಸಬೇಕು, ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ಹಾಗೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಹೇಗೆ ಎಂಬುದನ್ನು ತಿಳಿಸಿಕೊಡುತ್ತದೆ. ಪ್ರಕೃತಿಗೆ ಸದಾ ಗೌರವ ನೀಡಬೇಕು. ಅದು ದೇವರು ನಮಗೆ ನೀಡಿರುವ ಅಮೂಲ್ಯ ವರವಾಗಿದೆ ಎಂದು ನಿವೃತ್ತ ಪ್ರಾಂಶುಪಾಲೆ ರಮಾ ವೈ.ಕೆ. ಹೇಳಿದರು.

. . . . . . . . .

ಸುಳ್ಯದ ಅಂಬಟೆಡ್ಕದ ಕನ್ನಡ ಭವನದಲ್ಲಿ ಆ. 15ರಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಜೇಸಿಐ ಸುಳ್ಯ ಪಯಸ್ವಿನಿ ಹಾಗೂ ಸಂಧ್ಯಾಚೇತನ ಪ್ರವಾಸ ಬಳಗ ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ‘ಆಟಿ ಕೂಟ 2026’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

. . . . . . .

ಆಟಿ ಆಚರಣೆಯನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ, ಈ ಅವಧಿಯಲ್ಲಿ ಪ್ರಕೃತಿ, ಆಹಾರ ಪದ್ಧತಿ ಹಾಗೂ ಜಲಮೂಲಗಳ ಸಂರಕ್ಷಣೆಯ ಮಹತ್ವವನ್ನು ಅರಿತುಕೊಳ್ಳಬೇಕು. ಪ್ರಕೃತಿ ಸಂಪತ್ತನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ರಮಾ ವೈ.ಕೆ. ಹೇಳಿದರು.

ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷ ಹಾಗೂ ವಿಶ್ರಾಂತ ಪ್ರಾಂಶುಪಾಲ ಕೆ.ಆರ್. ಗಂಗಾಧರ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ವಹಿಸಿದ್ದರು.

ಜೇಸಿಐ ವಲಯ 15ರ ಜೆಡ್‌ಡಿ ಸುಹಾಸ್ ಮರಿಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಜೇಸಿಐ ಸುಳ್ಯ ಪಯಸ್ವಿನಿಯ ಅಧ್ಯಕ್ಷೆ ಜೆ.ಎಫ್.ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮಕ್ಕೆ ಶುಭ ಹಾರೈಸಿ, ವಿವಿಧ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು ವಾಚಿಸಿದರು.

ಸಂಧ್ಯಾ ಚೇತನಾ ಪ್ರವಾಸ ಬಳಗದ ಗೌರವಾಧ್ಯಕ್ಷ ಡಾ. ರಂಗಯ್ಯ, ಅಧ್ಯಕ್ಷ ಚೆನ್ನಕೇಶವ ಜಾಲ್ಸೂರು, ಅಕಾಡೆಮಿ ಸದಸ್ಯ ಗೋಪಾಲ ಪೆರಾಜೆ ಹಾಗೂ ಲತಾ ದೇವಿಪ್ರಸಾದ್ ಕುದ್ಪಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಚಂದ್ರಾವತಿ ಬಡ್ಡಡ್ಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸತ್ಯ ಶಾಂತಿ ತ್ಯಾಗಮೂರ್ತಿ ಜೇಸಿ ವಾಣಿ ವಾಚಿಸಿ, ಅಕಾಡೆಮಿ ಸದಸ್ಯ ವಿನೋದ್ ಮೂಡಗದ್ದೆ ಕಾರ್ಯಕ್ರಮ ನಿರೂಪಿಸಿ, ತಾರಾ ಮಾಧವ ಚೂಂತಾರು ವಂದಿಸಿದರು.

ಕಾರ್ಯಕ್ರಮದ ಅಂಗವಾಗಿ ಆಟಿ ಸಂಸ್ಕೃತಿ ಹಾಗೂ ಸಂಪ್ರದಾಯಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading