ಪಿ.ಎಂ.ಶ್ರೀ ಕೆ.ಪಿ.ಎಸ್ ಸುಳ್ಯದಲ್ಲಿ 80ನೇ ಅದ್ದೂರಿ ಸ್ವಾತಂತ್ರ್ಯೋತ್ಸವ

ಸುಳ್ಯ : ನಗರದ ಪಿಎಂಶ್ರೀ ಕೆಪಿಎಸ್ ಶಾಲೆ ಸುಳ್ಯ ಇಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಆಗಸ್ಟ್ 15ರಂದು ಬೆಳಗ್ಗೆ 8 ಗಂಟೆಗೆ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್‌ಡಿಎಂಸಿ) ಅಧ್ಯಕ್ಷ ರವಿರಾಜ್ ಅಡ್ಕಾರ್ ಅವರು ಶಾಲಾ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

. . . . . . . . .

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮೈಸೂರಿನಿಂದ ಆಗಮಿಸಿದ್ದ ಡಾ. ಸುಂದರ್ ಕೇನಾಜೆ ಅವರು ಸಕುಟುಂಬಸ್ಥರ ಪರವಾಗಿ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.

. . . . . . .

ಇದೇ ಸಂದರ್ಭದಲ್ಲಿ ಶಾಲೆಯೊಂದಿಗೆ ತಮ್ಮ ಕುಟುಂಬ ಹೊಂದಿರುವ ಅವಿಸ್ಮರಣೀಯ ಸಂಬಂಧವನ್ನು ಸ್ಮರಿಸಿಕೊಂಡು, ವಿದ್ಯಾರ್ಥಿಗಳಿಗೆ ಸಂದರ್ಭೋಚಿತವಾಗಿ ಹಿತನುಡಿಗಳನ್ನಾಡಿ ಸಿಹಿತಿಂಡಿ ವಿತರಿಸಿದರು.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಶಾಲಾ ವಿದ್ಯಾರ್ಥಿಗಳು ಬ್ಯಾಂಡ್‌ ಸೆಟ್‌ನೊಂದಿಗೆ ಅತಿಥಿ, ಅಭ್ಯಾಗತರನ್ನು ಆತ್ಮೀಯವಾಗಿ ಸ್ವಾಗತಿಸಿದರು. ವಿದ್ಯಾರ್ಥಿಗಳ ದೇಶಭಕ್ತಿ ಘೋಷಣೆಗಳು ಶಾಲಾ ಆವರಣದಲ್ಲಿ ಮೊಳಗಿದವು. ಬಳಿಕ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ನಂತರ ನಡೆದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶಾಲೆಯ ಎಲ್ಲಾ ಶಿಕ್ಷಕ ವೃಂದ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತು ಭಾಷಣ , ದೇಶಭಕ್ತಿ ಗೀತೆ, ಛದ್ಮವೇಷ, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಯೋಧರ ಚರಿತ್ರೆ ವಾಚನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನ ಮೂಡಿಸುವ ವಿವಿಧ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು.

ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಪಾರೆಪ್ಪಾಡಿ ಅವರು ಸರ್ವರನ್ನು ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ “ವಿದ್ಯಾರ್ಥಿಗಳು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗವನ್ನು ಸ್ಮರಿಸಿ, ರಾಷ್ಟ್ರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುವ ಸಂಕಲ್ಪ ಮಾಡಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದ ಯಶಸ್ಸಿಗೆ ಶಾಲೆಯ ಎಲ್ಲಾ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪೋಷಕರು, ಅಡುಗೆ ಸಿಬ್ಬಂದಿ, ಊರಿನ ವಿದ್ಯಾಭಿಮಾನಿಗಳು ಹಾಗೂ ವಿದ್ಯಾರ್ಥಿಗಳು ಸಹಕಾರ ನೀಡಿದರು. ಶಾಲೆಯ ಹಿರಿಯ ದೈಹಿಕ ಶಿಕ್ಷಕಿ ಸುನಂದಾ ಶೆಟ್ಟಿ ಸರ್ವರಿಗೂ ವಂದಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ಸಕ್ರಿಯ ಭಾಗವಹಿಸುವಿಕೆಯಿಂದ ಸ್ವಾತಂತ್ರ್ಯೋತ್ಸವವು ಸಂಭ್ರಮ ಸಂಭ್ರಮ ಸಡಗರದಿಂದ ನೆರವೇರಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading