ಮಡಪ್ಪಾಡಿಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

. . . . . . . . .

ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ, ಮಡಪ್ಪಾಡಿ ಇದರ ಆಶ್ರಯದಲ್ಲಿ ಹಾಗೂ ಯುವಜನ ಸಂಯುಕ್ತ ಮಂಡಳಿ (ರಿ.), ಸುಳ್ಯ ಮತ್ತು ಯುವಕ ಮಂಡಲ (ರಿ.), ಮಡಪ್ಪಾಡಿ ಇವರ ಸಹಯೋಗದೊಂದಿಗೆ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆ. 15ರಂದು ಮಡಪ್ಪಾಡಿ ಶಾಲಾ ವಠಾರದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸದಾನಂದ ಬಲ್ಕಜೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವಿನಯಕುಮಾರ್ ಮುಳುಗಾಡು, ರಾಜ್ಯ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾದ ಪಿ.ಸಿ. ಜಯರಾಮ, ಸುಳ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಸೋಮಶೇಖರ ಕೇವಳ, ಮಡಪ್ಪಾಡಿ ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಉಷಾ ಜಯರಾಮ, ಯುವಜನ ಸಂಯುಕ್ತ ಮಂಡಳಿ (ರಿ.), ಸುಳ್ಯದ ನಿರ್ದೇಶಕರಾದ ಲೋಹಿತ್ ಬಾಳಿಕಳ, ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷರಾದ ಸುಮಂತ್ ಶೀರಡ್ಕ, ಸುಳ್ಯ ಎ.ಪಿ.ಎಂ.ಸಿ.ಯ ಮಾಜಿ ಅಧ್ಯಕ್ಷರಾದ ಜಯರಾಮ ಹಾಡಿಕಲ್ಲು, ಮಡಪ್ಪಾಡಿ ಮಂಜುಶ್ರೀ ಯಕ್ಷಗಾನ ಕಲಾ ಸಂಘದ ಅಧ್ಯಕ್ಷರಾದ ತಾರಾನಾಥ ಅಂಬೆಕಲ್ಲು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಕುಶಾಲಪ್ಪ ಪಾರೆಪ್ಪಾಡಿ ಉಪಸ್ಥಿತರಿದ್ದರು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಯುವಕ ಮಂಡಲದ ಸದಸ್ಯರು, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉತ್ಸಾಹದಿಂದ ಭಾಗವಹಿಸಿದ್ದರು.
ಶಾಲಾ ಮುಖ್ಯೋಪಾಧ್ಯಾಯರಾದ ಕುಶಾಲಪ್ಪ ಪಾರೆಪ್ಪಾಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ ಜಯಲತಾ ಜಯರಾಮ ವಂದನಾರ್ಪಣೆ ಸಲ್ಲಿಸಿದರು.ರಂಜಿತ್ ಶೀರಡ್ಕ ಕಾರ್ಯಕ್ರಮವನ್ನು ನಿರೂಪಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading