ಪಂಜ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಪಂಜ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

. . . . . . . . .

ಧ್ವಜಾರೋಹಣವನ್ನು ನೆರವೇರಿಸಿದ ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಲಿಗೋದರ ಆಚಾರ್ಯ ಮಾತನಾಡುತ್ತಾ “ಆಗಸ್ಟ್ 15 ಭಾರತೀಯರ ಪಾಲಿಗೆ ಹೆಮ್ಮೆಯ ದಿನ. ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಭಾರತ ಸ್ವಾತಂತ್ರ್ಯ ಪಡೆದ ಐತಿಹಾಸಿಕ ದಿನವನ್ನು ಪ್ರತಿವರ್ಷ ಸ್ವಾತಂತ್ರ್ಯ ದಿನವಾಗಿ ಆಚರಿಸಲಾಗುತ್ತದೆ. ಸ್ವಾತಂತ್ರ್ಯ ದಿನವು ಕೇವಲ ಧ್ವಜಾರೋಹಣ ಮತ್ತು ಸಿಹಂಚಿಕೆಯ ಕಾರ್ಯಕ್ರಮವಲ್ಲ. ದೇಶಕ್ಕಾಗಿ ಹೋರಾಡಿದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವ ದಿನವಾಗಿದೆ.ಸ್ವಾತಂತ್ರ್ಯ ಹೋರಾಟಗಾರರು ಸ್ವತಂತ್ರ ಭಾರತವನ್ನು ಕಟ್ಟಿಕೊಟ್ಟಿದ್ದಾರೆ. ನಮ್ಮ ಭಾರತ ದೇಶವನ್ನು ಮತ್ತಷ್ಟು ಬಲಿಷ್ಠ, ಸಮಾನತೆಯ ಮತ್ತು ಅಭಿವೃದ್ಧಿಯ ರಾಷ್ಟ್ರವನ್ನಾಗಿ ರೂಪಿಸುವ ಹೊಣೆಗಾರಿಕೆ ಇಂದಿನ ಯುವ ಪೀಳಿಗೆ ಮೇಲಿದೆ”ಎಂದರು. ಶಾಲಾ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ.ಟಿ ಅವರು ಎಲ್ಲರನ್ನೂ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಸೌಮ್ಯಶ್ರೀ, ಶಾಲಾ ಶಿಕ್ಷಕ ವೃಂದದವರು, ಪೋಷಕ ವೃಂದದವರು, ಮಕ್ಕಳು ಉಪಸ್ಥಿತರಿದ್ದರು. ನಂತರ ಶಾಲೆಯಿಂದ ಪಂಜ ಬಸ್ಟ್ಯಾಂಡ್ ವರೆಗೆ ಮಕ್ಕಳಿಂದ ಪಥ ಸಂಚಲನ ನಡೆಯಿತು. ನಂತರ ನೃತ್ಯ ಚದ್ಮ ವೇಷ ಮಕ್ಕಳಿಂದ ನಡೆಯಿತು. ವಿಜೇತ ವಿದ್ಯಾರ್ಥಿಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಬಹುಮಾನ ವಿತರಿಸಿದರು. ಶಿಕ್ಷಕ ಶಿವಾನಂದ ನಿರೂಪಿಸಿದ ಕಾರ್ಯಕ್ರಮದ ಕೊನೆಯಲ್ಲಿ ಶಿಕ್ಷಕಿ ಕಮಲ ಧನ್ಯವಾದ ಸಮರ್ಪಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading