ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಆ.17ರಂದು ನಾಗರಪಂಚಮಿ ಆಚರಣೆ ಮಾಡಲಾಯಿತು. ಆ ಪ್ರಯುಕ್ತ ಬೆಳಿಗ್ಗೆ ನಾಗತಂಬಿಲ ಸೇವೆ ಹಾಗೂ ಶ್ರೀ ಕ್ಷೇತ್ರದ ದೈವಗಳ ಚಾವಡಿಯಲ್ಲಿ ತಿಂಗಳ ಸಂಕ್ರಮಣ ಪೂಜೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸರ್ವಸದಸ್ಯರು, ಸಹಾಯಕ ಅರ್ಚಕರು, ದೇವಸ್ಥಾನದ ಸಿಬ್ಬಂದಿಗಳು ಹಾಗೂ ಕೊಡುಗಟ್ಟಿನ ಭಕ್ತಾದಿಗಳು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading