ಪಂಜದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಪಂಜ, ಆ. 19: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಸುಳ್ಯ ತಾಲೂಕು ಪಂಜ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಪಂಜದಲ್ಲಿ ಆ.19ರಂದು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.

. . . . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ದೇವಿಪ್ರಸಾದ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಶಶಿಧರ ಪಳಂಗಾಯ ಅವರು ದುಶ್ಚಟಗಳಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ದುಶ್ಚಟಗಳಿಂದ ದೂರವಿದ್ದು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿಕೊಳ್ಳುವಂತೆ ಅವರು ಕರೆ ನೀಡಿದರು.

. . . . . . .

ಕಾರ್ಯಕ್ರಮದಲ್ಲಿ ಒಕ್ಕೂಟಗಳ ವಲಯ ಅಧ್ಯಕ್ಷ ಧರ್ಮಪಾಲ ಕಣಕಲ್, ವಲಯ ಜನಜಾಗೃತಿ ಅಧ್ಯಕ್ಷ ಮೋನಪ್ಪ ಗೌಡ ಬೊಳ್ಳಜೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾ ಸದಸ್ಯ ಶಿವಪ್ರಸಾದ್ ಮಾದನಮನೆ, ಪಂಜ ಒಕ್ಕೂಟದ ಅಧ್ಯಕ್ಷೆ ನಿರ್ಮಲ ಪಲ್ಲೋಡಿ ಹಾಗೂ ಮೇಲ್ವಿಚಾರಕಿ ಮಮತಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಲ್ಲಿ ಆರೋಗ್ಯ ಮತ್ತು ದುಶ್ಚಟಮುಕ್ತ ಜೀವನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading