ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಸುಳ್ಯ: ಪವಿತ್ರ ಕ್ಷೇತ್ರಗಳಲ್ಲಿರುವ ಸಾವಿರಾರು ಕೋಟಿ ರೂಪಾಯಿ ಹಣ ಇನ್ನೂ ಖಜಾನೆಯಲ್ಲಿದೆ. ವಾಲ್ಮೀಕಿ ನಿಗಮದ ಹಣವನ್ನು ಲೂಟಿ ಮಾಡುವ ಮೂಲಕ ಬಡವರನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಶಾಂತಿ ಸೃಷ್ಟಿಸುವ ಕಾರ್ಯವನ್ನು ಮಾಡಬಾರದು ಎಂದು ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದರು.

. . . . . . . . .

ಅವರು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಆ. 21ರಂದು ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

. . . . . . .

ರಾಜಕೀಯ ವ್ಯವಸ್ಥೆ ಎಂದರೆ ಸಾಮಾನ್ಯ ಜನರ ಧ್ವನಿಯಾಗಿ ಮಾತನಾಡುವ ವ್ಯವಸ್ಥೆ. ಜನರು ನೀಡಿರುವ ಅಧಿಕಾರವನ್ನು ಬಳಸಿಕೊಂಡು ರಾಜ್ಯದ ಹಿತವನ್ನು ಕಾಪಾಡುವ ಕೆಲಸವನ್ನು ಮಾಡಬೇಕು. ಆದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಕ್ರಮ ಸಕ್ರಮ ಸಮಿತಿಯ ಮೂಲಕ ಸಾಮಾನ್ಯ ಜನರಿಗೆ ನ್ಯಾಯ ಒದಗಿಸುವ ಬದಲು ಅಪಮಾನ ಮಾಡಲಾಗಿದೆ ಎಂದು ಆರೋಪಿಸಿದರು.

ಮಾಜಿ ಸಚಿವ ಎಸ್. ಅಂಗಾರ ಅವರ ಅವಧಿಯಲ್ಲಿ ಅಕ್ರಮ ಸಕ್ರಮ ಯೋಜನೆಯಡಿ ಸಲ್ಲಿಕೆಯಾಗಿರುವ ಕಡತಗಳು ಇನ್ನೂ ಬಾಕಿ ಇವೆ. ಸಾಮಾನ್ಯ ಜನರಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ ಅವುಗಳನ್ನು ಕಾರ್ಯಗತಗೊಳಿಸಬೇಕು ಎಂದು ತಾಲೂಕು ತಹಶೀಲ್ದಾರ್ ಅವರಿಗೆ ಒತ್ತಾಯಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳನ್ನು ಕರೆಸಿ ಸರ್ಕಾರದ ಯೋಜನೆಗಳನ್ನು ಅರ್ಹ ಜನಸಾಮಾನ್ಯರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಮುಖಂಡ ಹರೀಶ್ ಕಂಜಿಪಿಲಿ ಮಾತನಾಡಿ, ನೀಟ್ ಪರೀಕ್ಷೆಯಲ್ಲಿ ಅಧಿಕಾರಿಗಳು ಮಾಡಿದ ತಪ್ಪಿನ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಉದಾಹರಣೆ ಇದೆ. ಆದರೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದರೂ ಅವರು ರಾಜೀನಾಮೆ ನೀಡುತ್ತಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇದ್ದರೆ, ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾಜಿ ತಾ. ಪಂ. ಅಧ್ಯಕ್ಷರಾದ ಆಶಾ ತಿಮ್ಮಪ್ಪ, ಸುಹಾಸಿನಿ, ಜಯಪ್ರಕಾಶ್ ಕುಂಚಡ್ಕ, ಚನಿಯ ಕಲ್ತಡ್ಕ, ಮಾಜಿ ನ. ಪಂ. ಅಧ್ಯಕ್ಷ ವಿನಯ್ ಕಂದಡ್ಕ ಹಾಗೂ ಮಾಜಿ ತಾ. ಪಂ. ಸದಸ್ಯರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading