ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದ ಬೈಲೆ ನಿವಾಸಿಗಳ ಭೇಟಿ: ರಸ್ತೆ ನಿರ್ಮಾಣದ ಭರವಸೆ

ಗೂನಡ್ಕ: ಸಂಪಾಜೆ ಗ್ರಾಮದ ಬೈಲೆ ಬಸಳೆ ಭಾಗದಲ್ಲಿ ರಸ್ತೆ ಅಭಿವೃದ್ಧಿ ಆಗದ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರಕ್ಕೆ ತೀರ್ಮಾನಿಸಿದ್ದ ನಿವಾಸಿಗಳನ್ನು ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್ ಭೇಟಿ ಮಾಡಿ ಸಮಸ್ಯೆ ಆಲಿಸಿದರು.

. . . . . . . . .

ಸ್ಥಳಕ್ಕೆ ಭೇಟಿ ನೀಡಿದ ಶಾಹಿದ್ ತೆಕ್ಕಿಲ್ ಅವರು ನಿವಾಸಿಗಳ ಸಮಸ್ಯೆಗಳನ್ನು ಆಲಿಸಿ, ರಸ್ತೆ ಪರಿಸ್ಥಿತಿಯನ್ನು ಪರಿಶೀಲಿಸಿದರು. ಬಳಿಕ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚಿಸಿದರು.

. . . . . . .

ಈ ಭಾಗದ ಜನರಿಗೆ ಯೋಗ್ಯ ರಸ್ತೆ ನಿರ್ಮಾಣ ಕಲ್ಪಿಸುವ ನಿಟ್ಟಿನಲ್ಲಿ ಸರಕಾರದ ಮಟ್ಟದಲ್ಲಿ ಸಂಬಂಧಪಟ್ಟ ಸಚಿವರ ಗಮನಕ್ಕೆ ಸಮಸ್ಯೆಯನ್ನು ತಂದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು. ಸ್ಥಳೀಯ ಇಲಾಖೆಯ ಮೂಲಕವೂ ಸಮಸ್ಯೆಗೆ ತುರ್ತು ಗಮನ ಹರಿಸಿ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚಿಸಿದರು.

ಈ ಸಂದರ್ಭದಲ್ಲಿ ಬೈಲೆ ಬಸಳೆ ಭಾಗದ ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ತಮ್ಮ ಬಹುಕಾಲದ ರಸ್ತೆ ಸಮಸ್ಯೆಯನ್ನು ಶಾಹಿದ್ ತೆಕ್ಕಿಲ್ ಅವರ ಗಮನಕ್ಕೆ ತಂದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading