ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರನ್ನು ಭೇಟಿಯಾಗಿ ಕ್ಷೇತ್ರದ ವಿಚಾರಗಳ ಬಗ್ಗೆ ಚರ್ಚೆ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕುಕ್ಕೆ ಸುಬ್ರಹ್ಮಣ್ಯ ಆರೋಗ್ಯಕೇಂದ್ರ ಮತ್ತು ಬೆಳ್ಳಾರೆ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಿ 24×7 ಸೇವೆಯನ್ನು ಕಲ್ಪಿಸುವಂತೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್ ಅವರಿಗೆ ತಿಂಗಳ ಹಿಂದೆ ಮನವಿ ಸಲ್ಲಿಸಿದ್ದರು.

. . . . . . . . .

ಮನವಿಯನ್ನು ಪರಿಗಣಿಸಿದ ಸಚಿವರು ಈ ಎರಡು ಆಸ್ಪತ್ರೆಗಳಲ್ಲಿ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಅರೋಗ್ಯ ಇಲಾಖೆಯ ಆಯುಕ್ತರಿಗೆ ಪತ್ರದ ಮೂಲಕ ಸೂಚಿಸಿದ್ದರು. ಅದರಂತೆ ಆ.25 ರಂದು ಅರೋಗ್ಯ ಇಲಾಖೆಯ ಆಯುಕ್ತರಾದ ಗುರುದತ್ತ ಹೆಗ್ಗಡೆ ಅವರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಿದರು.

. . . . . . .

ಈ ಸಂದರ್ಭದಲ್ಲಿ ಸುಳ್ಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತನಿಧಿ ಕೇಂದ್ರ ಸ್ಥಾಪನೆ ಮತ್ತು ಕಡಬ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರ ಸ್ಥಾಪನೆಗೆ ನೂತನ ಕಟ್ಟಡ ನಿರ್ಮಾಣದ ವಿಚಾರಗಳನ್ನು ಸಚಿವರಿಗೆ ಮನವಿ ಸಲ್ಲಿಸಿದ್ದು ಆ ಬೇಡಿಕೆಗಳನ್ನು ಕೂಡ ಶೀಘ್ರವಾಗಿ ಕ್ರಮಕೈಗೊಳ್ಳುವಂತೆ ಸೂಚಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading