ಕುಕ್ಕೆ ಸುಬ್ರಹ್ಮಣ್ಯದಲ್ಲಿ 24*7 ತುರ್ತು ಚಿಕಿತ್ಸಾ ಘಟಕ ಸ್ಥಾಪನೆಗೆ ಒತ್ತಾಯ ; ಆಸ್ಪತ್ರೆ ಹೋರಾಟ ಸಮಿತಿಯಿಂದ ಸೆ.02ರಂದು “ಪತ್ರ ಅಭಿಯಾನ”

“ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ದಿನಂಪ್ರತಿ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಅಲ್ಲದೆ, ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ 3-4 ಗ್ರಾಮಗಳ ಜನರಿಗೆ ತುರ್ತು ವೈದ್ಯಕೀಯ ಸೇವೆಯ ಅಗತ್ಯವಿರುವ ಸಂದರ್ಭಗಳಲ್ಲಿ, ಆಕಸ್ಮಿಕ ಅಪಘಾತಗಳು ಮತ್ತು ಇತರ ಅನಿರೀಕ್ಷಿತ ಘಟನೆಗಳು ಸಂಭವಿಸಿದಾಗ ಸಕಾಲಕ್ಕೆ ಸೂಕ್ತ ಚಿಕಿತ್ಸೆ ದೊರೆಯದೆ ಈಗಾಗಲೇ ಹಲವು ಅಮೂಲ್ಯ ಜೀವಗಳು ಬಲಿಯಾಗಿವೆ. ಆದ್ದರಿಂದ, ಕುಕ್ಕೆ ಸುಬ್ರಹ್ಮಣ್ಯದಲ್ಲಿ 24*7 ತುರ್ತು ಚಿಕಿತ್ಸಾ ಘಟಕವನ್ನು ತಕ್ಷಣವೇ ಪ್ರಾರಂಭಿಸಲು ಸರ್ಕಾರ, ಜನಪ್ರತಿನಿಧಿಗಳು, ಸಚಿವರು ಹಾಗೂ ಮುಖ್ಯಮಂತ್ರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಒತ್ತಾಯಿಸಿ ಈ ವಿಷಯವನ್ನು ಸರ್ಕಾರದ ಗಮನಕ್ಕೆ ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 02ರಂದು ಪೂರ್ವಾಹ್ನ 10:00 ಗಂಟೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿ ಸಾವಿರಾರು ಸಾರ್ವಜನಿಕರ ಸಹಿಯೊಂದಿಗೆ “ಪತ್ರ ಅಭಿಯಾನ” ನಡೆಯಲಿದೆ. ಈ ಹೋರಾಟಕ್ಕೆ ಸ್ಥಳೀಯರು, ಸುತ್ತಮುತ್ತಲಿನ ಗ್ರಾಮಸ್ಥರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಸಹಿಯೊಂದಿಗೆ ಪತ್ರ ನೀಡಿ ಬೆಂಬಲಿಸಬೇಕಾಗಿ” ಆಸ್ಪತ್ರೆ ಹೋರಾಟ ಸಮಿತಿ ವಿನಂತಿಸಿದೆ. ಮುದ್ರಿತ ಪತ್ರದ ವ್ಯವಸ್ಥೆಯನ್ನು ಸ್ಥಳದಲ್ಲೇ ಸಮಿತಿಯ ವತಿಯಿಂದ ಮಾಡಿಕೊಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading