ಸಹಕಾರ ಮಹಾಮಂಡಲದ ನಿರ್ದೇಶಕ ಸ್ಥಾನಕ್ಕೆ ಚುನಾವಣೆಯಲ್ಲಿ ಶಶಿಕುಮಾರ್ ಬಾಲ್ಯೊಟ್ಟು ಭರ್ಜರಿ ಗೆಲುವು

ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ಆಡಳಿತ ಮಂಡಳಿಗೆ ಆ. 25 ರಂದು ನಡೆದ ಚುನಾವಣೆಯಲ್ಲಿ ಮೈಸೂರು ವಿಭಾಗದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಎಲ್ಲ 18 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

. . . . . . . . .

ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಬೆಂಬಲದಿಂದ ಮೈಸೂರು ವಿಭಾಗದಲ್ಲಿದ್ದ 18ಕ್ಕೆ 18 ಮತಗಳು ಶಶಿಕುಮಾರ್ ರೈ ಅವರಿಗೆ ದೊರೆತಿದೆ. ಈ ಮೂಲಕ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ 62 ವರ್ಷಗಳ ಇತಿಹಾಸದಲ್ಲಿ ನಿರ್ದೇಶಕರಾಗಿ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

. . . . . . .

ಸಹಕಾರ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾಗಿ, ಪುತ್ತೂರು ತಾಲ್ಲೂಕಿನ ಇರ್ದೆ-ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading