ಅಜ್ಜಾವರ : ಪ್ರೌಢಶಾಲೆಯಲ್ಲಿ ‘ಅನ್ನಪೂರ್ಣ ಭೋಜನ ಶಾಲೆ’ ಉದ್ಘಾಟನೆ – ಶ್ರೀ ಕ್ಷೇ.ಧ. ಗ್ರಾ.ಯೋಜನೆಯ ವತಿಯಿಂದ 75 ಸಾವಿರ ಅನುದಾನ ಮಂಜೂರು

ಅಜ್ಜಾವರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.), ಸುಳ್ಯ ತಾಲೂಕು ಅಜ್ಜಾವರ ವಲಯದ ವತಿಯಿಂದ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಪಿ.ಎಂ. ಪೋಷಣ್‌ ಮಧ್ಯಾಹ್ನ ಉಪಹಾರ ಯೋಜನೆಯ ‘ಅನ್ನಪೂರ್ಣ ಭೋಜನ ಶಾಲೆ’ ನಿರ್ಮಾಣಕ್ಕೆ ರೂ.75,000 ಅನುದಾನ ಮಂಜೂರು ಮಾಡಲಾಗಿದೆ.

. . . . . . . . .

‘ಅನ್ನಪೂರ್ಣ ಭೋಜನ ಶಾಲೆ’ಯ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು. ಸಂಕೇಶ್ ಫೌಂಡೇಶನ್‌ನ ಅಧ್ಯಕ್ಷರಾದ ಶ್ರೀ ಅಬ್ದುಲ್ ರೆಹಮಾನ್ ಸಂಕೇಶ ಅವರು ಭೋಜನ ಶಾಲೆಯ ಕಟ್ಟಡವನ್ನು ಉದ್ಘಾಟಿಸಿದರು.

. . . . . . .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶ್ರೀ ರಾಜಣ್ಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್. ಹರಗಿ, ಮಹಾತ್ಮಗಾಂಧಿ ಮಲ್ನಾಡು ಪ್ರೌಢಶಾಲೆ ಕೊಡಿಯಾಲಬೈಲು ಇದರ ದೊಡ್ಡಣ್ಣ ಬರಮೇಲು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಶ್ರೀಮತಿ ವೀಣಾ ಎಂ.ಟಿ., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಸುಳ್ಯ ಇದರ ಯೋಜನಾಧಿಕಾರಿ ಮಾಧವ ಗೌಡ, ಲಯನ್ಸ್ ಅಧ್ಯಕ್ಷರಾದ ವಿನೋದ್ ಲಸ್ರಾದೋ, ಜನಜಾಗೃತಿ ವಲಯಾಧ್ಯಕ್ಷರಾದ ಶಿವಪ್ರಸಾದ್ ಅಡ್ಪಂಗಾಯ, ಎಸ್‌ಡಿಎಂಸಿ ಅಧ್ಯಕ್ಷರಾದ ಪ್ರಕಾಶ್ ಕಣೆಮರಡ್ಕ, ಉಪಾಧ್ಯಕ್ಷರಾದ ಶ್ರೀ ಸೌಕತ್ ಅಲಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗುರುರಾಜ್, ಕಾರ್ಯದರ್ಶಿ ಶ್ರೀಮತಿ ಮಧುರಾ ಎಂ.ಆರ್. ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ಗೋಪಿನಾಥ್, ಶಿಕ್ಷಕ ವೃಂದ, ಹಿರಿಯ ವಿದ್ಯಾರ್ಥಿಗಳು, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸ್ಥಳೀಯ ಸೇವಾಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಶುಚಿತ್ವಯುತ ಮಧ್ಯಾಹ್ನದ ಊಟವನ್ನು ಒದಗಿಸಲು ‘ಅನ್ನಪೂರ್ಣ ಭೋಜನ ಶಾಲೆ’ ಸಹಕಾರಿಯಾಗಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಈ ನೆರವು ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಕೊಡುಗೆಯಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading