“ಮುಂದಿನ ಪೀಳಿಗೆಗೆ ಧಾರ್ಮಿಕ ಸಂಪ್ರದಾಯಗಳನ್ನು ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” : ಮಾಧವ ಗೌಡ ; ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಸುಳ್ಯ : “ಮುಂದಿನ ಪೀಳಿಗೆಗೆ ನಮ್ಮ ಧಾರ್ಮಿಕ ಸಂಪ್ರದಾಯ ಹಾಗೂ ಸಂಸ್ಕೃತಿಯನ್ನು ಕೊಂಡೊಯ್ಯುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ ಹೇಳಿದರು.

. . . . . . . . .

ಆರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪರಿವಾರಕಾನ ಒಕ್ಕೂಟ, ಆರಂಬೂರು ಒಕ್ಕೂಟ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶ್ರೀ ಮೂಕಾಂಬಿಕಾ ಭಜನಾ ಮಂದಿರದ ಸಂಯುಕ್ತ ಆಶ್ರಯದಲ್ಲಿ ನಡೆದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಧಾರ್ಮಿಕ ಭಾಷಣ ಮಾಡಿದರು.

. . . . . . .

“ಮನೆಯಲ್ಲಿನ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ಸಕ್ರಿಯವಾಗಿ ಭಾಗವಹಿಸುವಂತೆ ಮಾಡುವ ಮೂಲಕ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು. ವರಮಹಾಲಕ್ಷ್ಮಿ ಪೂಜೆಯೊಂದಿಗೆ ಅಷ್ಟಲಕ್ಷ್ಮಿಯರ ಆರಾಧನೆಯೂ ನಡೆಯುತ್ತದೆ. ಈ ಪೂಜೆಯಿಂದ ಮನೆಗಳಲ್ಲಿ ಸುಖ, ಶಾಂತಿ, ಸಮೃದ್ಧಿ, ಸಂತಾನ ಹಾಗೂ ಆರೋಗ್ಯ ವೃದ್ಧಿಯಾಗುತ್ತದೆ” ಎಂದು ಅವರು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ವೆಂಕಪ್ಪ ಗೌಡ ಅವರು ವರಮಹಾಲಕ್ಷ್ಮಿ ಪೂಜೆಯ ಹಿನ್ನೆಲೆ ಹಾಗೂ ಮಹತ್ವದ ಕುರಿತು ಮಾಹಿತಿ ನೀಡಿದರು.16ನೇ ವರ್ಷದ ಈ ಕಾರ್ಯಕ್ರಮ ಮುಂದಿನ ವರ್ಷಗಳಲ್ಲಿಯೂ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಊರಿನ ಗಣ್ಯರಾದ ಕೃಷ್ಣ ಕಾಮತ್, ಭಜನಾ ಮಂದಿರದ ಗೌರವಾಧ್ಯಕ್ಷ ಶ್ರೀಪತಿ ಭಟ್ ಹಾಗೂ ಪದೋನ್ನತಿ ಪಡೆದು ವರ್ಗಾವಣೆಗೊಂಡ ಕು. ದೀಕ್ಷಾ ನೆಡಿಚ್ಚಿಲ್ ಅವರನ್ನು ಗೌರವಿಸಲಾಯಿತು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸುಳ್ಯ ತಾಲೂಕು ಮಾಸ್ಟರ್ ರದೀಶನ್, ಆರಂಬೂರು ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ ನೆಡಿಚ್ಚಿಲ್, ನೂತನ ಅಧ್ಯಕ್ಷ ಅಶೋಕ ಪೀಚೆ, ಪರಿವಾರಕಾನ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಹಾಗೂ ನೂತನ ಅಧ್ಯಕ್ಷ ರತ್ನಾಕರ ರೈ ಆರಂಬೂರು ಉಪಸ್ಥಿತರಿದ್ದರು.

ಸೇವಾಪ್ರತಿನಿಧಿ ಸುರೇಶ್ ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕ ದಿನೇಶ್ ಡಿ. ಸ್ವಾಗತಿಸಿದರು. ಸೇವಾಪ್ರತಿನಿಧಿ ವಿಜಯಶ್ರೀ ವಂದಿಸಿದರು. ಪೂಜಾ ಕಾರ್ಯಕ್ರಮದ ವೈದಿಕ ವಿಧಿವಿಧಾನಗಳನ್ನು ಅಭಿರಾಮ್ ಭಟ್ ನೆರವೇರಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading