ಮಂಡೆಕೋಲು ಗ್ರಂಥಾಲಯದಲ್ಲಿ Magzter App ಕುರಿತು ಮಾಹಿತಿ ಕಾರ್ಯಾಗಾರ

ಮಂಡೆಕೋಲು : ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ವತಿಯಿಂದ Magzter App ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

. . . . . . . . .

ಗ್ರಂಥಾಲಯದಲ್ಲಿ ಲಭ್ಯವಿರುವ QR Code ಮೂಲಕ Magzter App ಅನ್ನು ಮೊಬೈಲ್‌ಗಳಲ್ಲಿ ಉಚಿತವಾಗಿ ಇನ್‌ಸ್ಟಾಲ್ ಮಾಡಿಕೊಂಡು, ಅದರಲ್ಲಿರುವ ವಿವಿಧ ಇ-ಮ್ಯಾಗಜಿನ್‌ಗಳು, ಪತ್ರಿಕೆಗಳು ಹಾಗೂ ಡಿಜಿಟಲ್ ಓದುವ ಸಂಪನ್ಮೂಲಗಳನ್ನು ಸದುಪಯೋಗಪಡಿಸಿಕೊಳ್ಳುವ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ ಹಾಗೂ ತರಬೇತಿ ನೀಡಲಾಯಿತು.

. . . . . . .

ಕಾರ್ಯಾಗಾರವನ್ನು Magzter Inc.ನ ಪಾಲುದಾರಿಕೆಗಳ ವಿಭಾಗದ ಜಾಗತಿಕ ಮುಖ್ಯಸ್ಥರಾದ ಮಟೂರ್ ರೋಹಿತ್ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, Magzter Appನ ವೈಶಿಷ್ಟ್ಯಗಳು, ಬಳಕೆಯ ವಿಧಾನ ಹಾಗೂ ಅದರಲ್ಲಿರುವ ವಿವಿಧ ಡಿಜಿಟಲ್ ಓದುವ ಸಂಪನ್ಮೂಲಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ 60ಕ್ಕೂ ಹೆಚ್ಚು ಮಂದಿ Magzter App ಅನ್ನು ತಮ್ಮ ಮೊಬೈಲ್‌ಗಳಲ್ಲಿ ಇನ್‌ಸ್ಟಾಲ್ ಮಾಡಿಕೊಂಡು, ಅದರ ಬಳಕೆ ಹಾಗೂ ಲಭ್ಯವಿರುವ ಡಿಜಿಟಲ್ ಸಂಪನ್ಮೂಲಗಳ ಕುರಿತು ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ, ಗ್ರಂಥಾಲಯ ಸಮಿತಿ ಸದಸ್ಯರು ಹಾಗೂ ಪತ್ರಿಕಾ ವರದಿಗಾರ ಗಣೇಶ್ ಮಾವಂಜಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಗ್ರಂಥಾಲಯದ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಅತಿಥಿಗಳನ್ನು ಹಾಗೂ ಭಾಗವಹಿಸಿದವರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಉದ್ದೇಶ ಹಾಗೂ ಗ್ರಂಥಾಲಯದ ಮೂಲಕ ಡಿಜಿಟಲ್ ಓದುವ ಸಂಪನ್ಮೂಲಗಳನ್ನು ಸಾರ್ವಜನಿಕರಿಗೆ ತಲುಪಿಸುವ ಮಹತ್ವದ ಕುರಿತು ಅವರು ಮಾತನಾಡಿದರು. ಬಳಿಕ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.

“ಓದುವ ಹವ್ಯಾಸ ಬೆಳೆಸೋಣ – ಡಿಜಿಟಲ್ ಜ್ಞಾನ ಸಂಪನ್ಮೂಲಗಳನ್ನು ಸದುಪಯೋಗಪಡಿಸಿಕೊಳ್ಳೋಣ” ಎಂಬ ಆಶಯದೊಂದಿಗೆ ನಡೆದ ಈ ಕಾರ್ಯಾಗಾರವು ಸಾರ್ವಜನಿಕರಲ್ಲಿ ಡಿಜಿಟಲ್ ಓದುವ ಹವ್ಯಾಸವನ್ನು ಬೆಳೆಸುವಲ್ಲಿ ಮಹತ್ವದ ಹೆಜ್ಜೆಯಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading