ಸುಬ್ರಹ್ಮಣ್ಯ : ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ(ರಿ.) ಸುಳ್ಯ ತಾಲೂಕು, ಜನ ಜಾಗೃತಿ ವೇದಿಕೆ ಸುಬ್ರಹ್ಮಣ್ಯ ವಲಯ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕುಲ್ಕುಂದ ಇವುಗಳ ಸಂಯುಕ್ತ ಆಶ್ರಯದಲ್ಲಿ ಕುಮಾರ ಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ| ಸಂಕೀರ್ತ ಹೆಬ್ಬರ್ ರವರ ಅಧ್ಯಕ್ಷತೆಯಲ್ಲಿ ದಿನಾಂಕ ಆ.29ರಂದು ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಕುಮಾರ ಸ್ವಾಮಿ ಪದವಿ ಪೂರ್ವ ಕಾಲೇಜಿನ ಕುಮಾರ ನಾಯರ್ ಸ್ಮೃತಿ ಭವನದಲ್ಲಿ ನಡೆಸಲಾಯಿತು.

. . . . . . . . .

ಈ ಕಾರ್ಯಕ್ರಮವನ್ನು ಸುಳ್ಯ ತಾಲೂಕಿನ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಶ್ರೀಮತಿ ವಿಮಲಾ ರಂಗಯ್ಯರವರು ದೀಪ ಪ್ರಜ್ವಲಿಸಿ ಮಾತನಾಡುತ್ತ, ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಉತ್ತಮವಾದ ಶಿಕ್ಷಣವನ್ನು ಪಡೆದು, ಮುಂದಿನ ದಿನಗಳಲ್ಲಿ ಜೀವನದಲ್ಲಿ ಆದರ್ಶ ಪ್ರಜೆಗಳಾಗಿ ಬಾಳಬೇಕು ಎಂದು ಹೇಳಿದರು.

. . . . . . .

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿರವರಾದ ಲೋಕೇಶ್ ಪೀರನ ಮನೆರವರು ಮಾತನಾಡುತ್ತಾ, “ಹದಿಹರೆ ವಯಸ್ಸಿನ ವಿದ್ಯಾರ್ಥಿಗಳು ಅತೀ ವೇಗದಲ್ಲಿ ದಾರಿ ತಪ್ಪುತ್ತಿದ್ದಾರೆ, ಬೀಡಿ, ಸಿಗರೇಟ್, ಮದ್ಯ ಸೇವನೆ, ತಂಬಾಕು, ಗಾಂಜಾ ಮುಂತಾದ ಸೇವನೆಯಿಂದ ದುಶ್ಚಟಕ್ಕೆ ಬಲಿಯಾಗುತ್ತಾರೆ. ಇದರಿಂದ ಅರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತದೆ. ಇವುಗಳು ಅಲ್ಲದೆ ಮೊಬೈಲ್ ಬಳಕೆ ಕೂಡ ವಿದ್ಯಾರ್ಥಿಗಳಿಗೆ ದುಶ್ಚಟಕ್ಕೆ ಅತೀ ವೇಗದಲ್ಲಿ ಬಲಿಯಾಗುತ್ತಾರೆ. ಹೀಗೆ ಮುಂದುವರಿಯುತ್ತ ಹೋದರೆ ಮುಂದಿನ ಜೀವನದಲ್ಲಿ ನಾವು ನರಕಯಾತನೆಗೆ ಒಳಪಡಬೇಕಾಗುತ್ತದೆ. ಇದನ್ನು ತಡೆಗಟ್ಟಬೇಕಾದರೆ ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಶಾಲಾ ಕಾಲೇಜಿನಲ್ಲಿ ಉತ್ತಮವಾದ ಶಿಕ್ಷಣವನ್ನು ಪಡೆದು ವಿದ್ಯಾರ್ಥಿ ಜೀವನದಲ್ಲಿ ಒಬ್ಬ ಆದರ್ಶ ವಿದ್ಯಾರ್ಥಿಯಾಗಬೇಕು. ನಮ್ಮ ಸಂಸ್ಕೃತಿ ಸಂಸ್ಕಾರದ ಬಗ್ಗೆ ಅರಿವು ಇರಬೇಕು. ಎಲ್ಲಾರು ಸ್ವಾಸ್ತ್ಯ ಸಮಾಜವನ್ನು ಬೆಳೆಸಿ, ದೇಶದ ಉತ್ತಮ ಆದರ್ಶ ಪ್ರಜೆಯಾಗಿ ಬಾಳಬೇಕು” ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ವಲಯ ಜನ ಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ಸತೀಶ್ ಟಿ.ಎನ್ ರವರು, ತಾಲೂಕು ಜನ ಜನಜಾಗೃತಿ ಸದಸ್ಯರಾದ ಗಿರಿಧರ ಸ್ಕಂದರವರು, ಸುಬ್ರಹ್ಮಣ್ಯ ವಿನ್ನರ್ ವೀಲ್ ಕ್ಲಬ್ ನ ಅಧ್ಯಕ್ಷರಾದ ಸೌಮ್ಯ ದಿನೇಶ್ ರವರು, ಕುಲ್ಕುಂದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ರವಿಚಂದ್ರರವರು, ಕುಲ್ಕುಂದ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿಯವರಾದ ಹರಿಣಾಕ್ಷಿರವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ತ್ಯ ಸಂಕಲ್ಪ ಪ್ರತಿಜ್ಞೆಯನ್ನು ಇಂಗ್ಲೀಷ್ ಉಪನ್ಯಾಸಕಿರವರಾದ ಶ್ರೀಮತಿ ಲಾವಣ್ಯ ಸುಧಾ ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಕಾಲೇಜಿನ ಉಪನ್ಯಾಸಕರು ಭಾಗವಹಿಸಿದರು.
ಈ ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕ ಬಾಲಕೃಷ್ಣ ಗೌಡ ಕೆ ರವರು ಸ್ವಾಗತಿಸಿ, ಕಾಲೇಜಿನ ಪಿ ಯು ವಿದ್ಯಾರ್ಥಿನಿ ಕು. ನಂದಿತಾ ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading