ಸುಳ್ಯ ನಗರ ಪಂಚಾಯತ್ ನಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ಸುಳ್ಯ ನಗರ ಪಂಚಾಯತ್ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸುಳ್ಯ ತಾಲೂಕು ತಹಶೀಲ್ದಾರ್, ನಗರ ಪಂಚಾಯತ್ ಆಡಳಿತಾಧಿಕಾರಿ ಶ್ರೀಮತಿ ಮಂಜುಳಾ ಧ್ವಜಾರೋಹಣ ನೆರವೇರಿಸಿದರು. ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ. ಮುಸ್ತಫ ಸಂದೇಶ ನೀಡಿದರು. ನಗರ ಪಂಚಾಯತ್ ಮುಖ್ಯಾಧಿಕಾರಿ ಬಸವರಾಜ್, ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಜಯಕರ...

ಶಾಂತಿನಗರ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಸ.ಉ.ಹಿ.ಪ್ರಾ ಶಾಲೆ ಶಾಂತಿನಗರದಲ್ಲಿ 80ನೇ ಸ್ವಾತಂತ್ರ ದಿನಾಚರಣೆಯನ್ನು ಅದ್ದೂರಿಯಾಗಿ ನಡೆಸಲಾಯಿತು. SDMC ಅಧ್ಯಕ್ಷರಾದ ಮೊಹಮ್ಮದ್ ನಝೀರ್ ಧ್ವಜಾರೋಹಣವನ್ನು ಮಾಡಿದರು. ನಂತರ ಪಥಸಂಚಲನ ಮೆರವಣಿಗೆಯು ಶಾಲೆಯಿಂದ ಪೈಚಾರ್ ವರೆಗೆ ಸಾಗಿತ್ತು. ನಂತರ ಸಭಾ ಕಾರ್ಯಕ್ರಮ ನಡೆಸಲಾಯಿತು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ SDMC ಅಧ್ಯಕ್ಷರಾದ ಮಹಮದ್ ನಝೀರ್, ಶ್ರೀ ಗೋಪಾಲಕೃಷ್ಣ ಭಟ್, ಅಬೂಬಕ್ಕರ್, ಭಾರತೀಯ ರೆಡ್ ಕ್ರಾಸ್...
Ad Widget

ಬೆಳ್ಳಾರೆ ಕೆ.ಪಿ.ಎಸ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ

ಬೆಳ್ಳಾರೆ ಕೆ.ಪಿ.ಎಸ್ ಸರಕಾರಿ ಹಿರಿಯ ಪ್ರಾಥಮಿಕ‌ ಶಾಲೆಯಲ್ಲಿ‌ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ‌ ಹರ್ಷ ಜೋಗಿಬೆಟ್ಟು ರವರು ಧ್ವಜಾರೋಹಣ ನೆರವೇರಿಸಿದರು. ಅಮರ ಸುಳ್ಯ ಸಮರ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಚಂದ್ರಾ ಕೋಲ್ಚಾರುರವರು ಜಗತ್ ಫೌಂಡೇಶನ್ ಮೂಲಕ ಹತ್ತು ಸಾವಿರ ರೂಪಾಯಿಗಳನ್ನು ಶಾಲಾ ಶಿಕ್ಷಣದ ಕಲಿಕೆಯ ವ್ಯವಸ್ಥೆಗಳಿಗಾಗಿ ನೀಡಿದರು. ಈ  ಸಂದರ್ಭದಲ್ಲಿ ಚಂದ್ರಾ...

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಡಾ.ರವಿ ಕಕ್ಕೆಪದವು ಅವರಿಗೆ ಸನ್ಮಾನ

ಸುಬ್ರಹ್ಮಣ್ಯ ಆಗಸ್ಟ್ 16 : ಆಗಸ್ಟ್ 15 ರಂದು ಜರಗಿದ 80ನೇ ಸ್ವಾತಂತ್ರ್ಯೋತ್ಸವ ದಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಸಮಾಜ ಸೇವಕ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾ. ರವಿ ಕಕ್ಕೆಪದವು ಅವರಿಗೆ ಸನ್ಮಾನ ಕಾರ್ಯಕ್ರಮ ಜರಗಿತು. ಸನ್ಮಾನ ನೆರವೇರಿಸಿದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಮಾತನಾಡುತ್ತಾ...

ಪಂಜ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಪಂಜ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ನೆರವೇರಿಸಿದ ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಲಿಗೋದರ ಆಚಾರ್ಯ ಮಾತನಾಡುತ್ತಾ "ಆಗಸ್ಟ್ 15 ಭಾರತೀಯರ ಪಾಲಿಗೆ ಹೆಮ್ಮೆಯ ದಿನ. ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಭಾರತ ಸ್ವಾತಂತ್ರ್ಯ ಪಡೆದ ಐತಿಹಾಸಿಕ ದಿನವನ್ನು ಪ್ರತಿವರ್ಷ ಸ್ವಾತಂತ್ರ್ಯ ದಿನವಾಗಿ ಆಚರಿಸಲಾಗುತ್ತದೆ....

ಸುಳ್ಯ ಮೆ| ಮುಳಿಯ ಕೃಷ್ಣ ಭಟ್ ಸನ್ಸ್ ಜ್ಯುವೆಲ್ಲರ್ಸ್ ವತಿಯಿಂದ ಆ.17ರಿಂದ ಆ. 31ರವರೆಗೆ ವಿಶೇಷ ಕೊಡುಗೆ

ಸುಳ್ಯದ ಶ್ರೀರಾಮ ಪೇಟೆ ಮುಖ್ಯರಸ್ತೆಯ ಕೊಯಿಂಗೋಡಿ ಸಂಕೀರ್ಣದಲ್ಲಿರುವ ಮೆ| ಮುಳಿಯ ಕೃಷ್ಣ ಭಟ್ ಸನ್ಸ್ ಜ್ಯುವೆಲ್ಸ್ ನಲ್ಲಿ ಆ. 17ರಿಂದ ಆ. 31ರವರೆಗೆ ಗ್ರಾಹಕರಿಗೆ ವಿಶೇಷ ಕೊಡುಗೆ ನೀಡುತ್ತಿದೆ.ಚಿನ್ನಾಭರಣಗಳ ಮೇಲೆ ಪ್ರತಿ ಗ್ರಾಂ. ಗೆ ರೂ.500ರಂತೆ ಹಾಗೂ ಚಿನ್ನಾಭರಣಗಳಿಗೆ ಪ್ರತಿ ಪವನಿನ ಮೇಲೆ ರೂ. 4,000/- ರಿಯಾಯತಿ ನೀಡಲಾಗುತ್ತಿದೆ. ಈ ಸುವರ್ಣಾವಕಾಶವನ್ನು ಗ್ರಾಹಕರು ಪಡೆದುಕೊಳ್ಳಬೇಕಾಗಿ ಮಾಲಕರು...

ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿಯ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿಯ ವತಿಯಿಂದ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇವರಗದ್ದೆಯ ಚಾಮುಂಡಿ ಕಟ್ಟೆಯ ಮೈದಾನದಲ್ಲಿ ನಡೆಯಿತು. ಗ್ರಾಮ ಸಮಿತಿಯ ಅಧ್ಯಕ್ಷರಾದ ಮಾದವ.ಡಿ ಅವರು ದ್ವಜಾರೋಹಣ ನೆರವೇರಿಸಿದರು, ಶಿವರಾಮ್ ರೈ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಹಿರಿಯ ನಾಯಕರಾದ ಕೃಷ್ಣಮೂರ್ತಿ ಭಟ್ ಅವರು ಸ್ವಾತಂತ್ರೋತ್ಸವದ ಕುರಿತು ಮಾತನಾಡಿದರು, ರವೀಂದ್ರ ರುದ್ರಪಾದ ರವರು ಶುಭಕೋರಿದರು.

ಜಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಯುವಕ ಮಂಡಲ ಮತ್ತು ಮಹಿಳಾ ಮಂಡಲದ ಸಹಕಾರದಲ್ಲಿ ಜಯನಗರ ಅಂಗನವಾಡಿ ಕೇಂದ್ರದಲ್ಲಿ ಆ. 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ನೆಬಿಸತ್ ಮಿಶ್ರಿಯ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ತಿರುಮಲೇಶ್ವರಿ, ಸಹಾಯಕಿ ಶ್ರೀನಿಧಿ ಹಾಗೂ ಯುವಕ ಮಂಡಲದ ಸದಸ್ಯರು, ಮಹಿಳಾ ಮಂಡಲದ ಸದಸ್ಯರು ಹಾಗೂ ಮಕ್ಕಳ ಪೋಷಕರು,...

ಕೊಡಿಯಾಲಬೈಲು: 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

ಮಹಾತ್ಮ ಗಾಂಧಿ  ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆ, ಕೊಡಿಯಾಲಬೈಲಿನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮಲ್ನಾಡ್ ಶಾಲೆಯ ಅಧ್ಯಕ್ಷರಾದ ಪಿ. ಎಸ್. ಗಂಗಾಧರ್ ಅವರು ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸ್ವಾತಂತ್ರ್ಯೋತ್ಸವದ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಅವರು ದೇಶದ ಸ್ವಾತಂತ್ರ್ಯ, ಏಕತೆ ಹಾಗೂ ರಾಷ್ಟ್ರದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.ಕಾರ್ಯಕ್ರಮದಲ್ಲಿ...

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು 80ನೇ ಸ್ವಾತಂತ್ರೋತ್ಸವ; ಯುವಕರು ರಾಷ್ಟ್ರ ಸೇವೆಯಲ್ಲಿ ಸದಾ ಸಿದ್ಧರಿರಬೇಕು; ಪಿ.ಬಿ. ದಿವಾಕರ ರೈ

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು 80ನೇ ಸ್ವಾತಂತ್ರೋತ್ಸವ ಸಂಭ್ರಮದಿಂದ ನೆರವೇರಿತು. ಕಾಲೇಜಿನ ಸಂಚಾಲಕ ಎ.ಸಿ. ವಸಂತ ಧ್ವಜಾರೋಹಣ ಗೈದರು. ನಂತರ ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಪ್ಯುಲರ್ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಪಿ.ಬಿ. ದಿವಾಕರ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವಕರು ರಾಷ್ಟ್ರ ಸೇವೆಯಲ್ಲಿ ಸದಾ ಸಿದ್ಧರಿರಬೇಕು ಎಂದು ಹೇಳಿದರು.ಹಿರಿಯ ವಿದ್ಯಾರ್ಥಿ...
Loading posts...

All posts loaded

No more posts

error: Content is protected !!