ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 80ನೇ ಸ್ವಾತಂತ್ರ್ಯ ಸಂಭ್ರಮ; ಗ್ರಾಮ ಗ್ರಾಮ ಅಭಿವೃದ್ಧಿಯಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಭಾಗೀರಥಿ ಮುರುಳ್ಯ

ಸುಳ್ಯ: ಭ್ರಷ್ಟಾಚಾರ ಮುಕ್ತ ನಾಗರಿಕ ಸಮಾಜ ನಿರ್ಮಾಣವಾದಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ. ಎಲ್ಲ ಶಾಲೆಗಳಲ್ಲೂ ಶಿಕ್ಷಕರ ಹುದ್ದೆಗಳು ಭರ್ತಿಯಾದಾಗ ಶಿಕ್ಷಣ ಪರಿಪೂರ್ಣವಾಗುತ್ತದೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಸುಳ್ಯದ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ...

ಆ. 29ರಂದು ರಂಗಮನೆಯಲ್ಲಿ ಯಕ್ಷ ಸಂಭ್ರಮ | ಬೆಳ್ಳಿ ಸಂಭ್ರಮಕ್ಕೆ ಚಾಲನೆ; ದಿಗ್ಗಜರಿಂದ ‘ಭೀಷ್ಮ ವಿಜಯ’ ತಾಳಮದ್ದಳೆ, ಪ್ರಶಸ್ತಿ ಪ್ರದಾನ

ಸುಳ್ಯ: ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಆ. 29ರಂದು ಯಕ್ಷ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಜೆ 6 ಗಂಟೆಗೆ ಪ್ರಸಿದ್ಧ ಅರ್ಥಧಾರಿಗಳಿಂದ ‘ಭೀಷ್ಮ ವಿಜಯ’ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಇದೇ ಸಂದರ್ಭದಲ್ಲಿ ರಂಗಮನೆಯ 25ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮಕ್ಕೆ ಕರ್ನಾಟಕ ರಾಜ್ಯ...
Ad Widget

ಚೊಕ್ಕಾಡಿ ವಿದ್ಯಾಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕುಕ್ಕುಜಡ್ಕ: ಚೊಕ್ಕಾಡಿ ವಿದ್ಯಾಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಗಸ್ಟ್ 15ರಂದು ಸಂಭ್ರಮದಿಂದ ಆಚರಿಸಲಾಯಿತು. ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ನಿರಂಜನ ಕೋಡ್ತುಗುಳಿ ಧ್ವಜಾರೋಹಣ ನೆರವೇರಿಸಿ, ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ಸ್ಮರಿಸಿಕೊಳ್ಳುವುದು ಇಂದು ಅಗತ್ಯವಾಗಿದೆ. ವಿದ್ಯಾರ್ಥಿಗಳು ಜೀವನದಲ್ಲಿ...

ಪುತ್ತೂರಿನಲ್ಲಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಪುತ್ತೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಪುತ್ತೂರು ಶಾಖೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಲಕ್ಷ್ಮೀಕಾಂತ್ ಬಿ. ಆಚಾರ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಅವರ ಪತ್ನಿ ವೇದಾ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಪುತ್ತೂರು ಶಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆ ಹಾಗೂ ಧ್ವಜಗೀತೆಗಳನ್ನು ಹಾಡಿ ಗೌರವ ಸಲ್ಲಿಸಲಾಯಿತು....

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ತೊಡಿಕಾನ: ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ. ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಷ ಗಲ್ಲಡ್ಕ ಹಾಗೂ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಬಿ. ದಿವಾಕರ ರೈ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ...

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಆ.18ರಂದು ನಾಗರಪಂಚಮಿ

ಬಾಳಿಲ: ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗತಂಬಿಲ ಸೇವೆ ಆ.18ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ.ನಾಗತಂಬಿಲ ಸೇವೆ ಮಾಡಿಸುವ ಭಕ್ತರು ಬೆಳಿಗ್ಗೆ 10 ಗಂಟೆಯ ಮುಂಚಿತವಾಗಿ ಹೂವು, ಹಾಲು ಹಾಗೂ ಸೀಯಾಳಗಳನ್ನು ತಂದು ಒಪ್ಪಿಸಿ ರಶೀದಿ ಪಡೆದುಕೊಳ್ಳುವಂತೆ ದೇವಾಲಯದ ಧರ್ಮದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಾಂಧಿನಗರ 80 ನೇ ಸ್ವಾತಂತ್ರ್ಯೋತ್ಸವ – ಸೌಹಾರ್ದತೆ, ಮಾನವೀಯತೆ ದೇಶದ ಅಭಿವೃದ್ಧಿ ಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ : ಅಹ್ಸನಿ

ಸುಳ್ಯ ಗಾಂಧಿನಗರ ಮುನವ್ವಿರುಲ್ ಇಸ್ಲಾಂ ಮದ್ರಸ, ಮುಹಿಯ್ಯದ್ದೀನ್ ಜುಮ್ಮಾ ಮಸ್ಜಿದ್ ತರ್ಭಿಯತುಲ್ ಇಸ್ಲಾಂ ಜಮಾಅತ್ ಕಮಿಟಿ ಆಶ್ರಯದಲ್ಲಿ 80 ನೇ ಸ್ವಾತಂತ್ರ್ಯ ದಿನಾಚಣೆಯ ನ್ನು ಸಡಗರ ಸಂಭ್ರಮ ದಿಂದ ಆಚರಿಸಲಾಯಿತುಜುಮ್ಮಾ ಮಸ್ಜಿದ್ ಅಧ್ಯಕ್ಷ ಹಾಜಿ ಕೆ ಎಂ ಎಸ್ ಮಹಮ್ಮದ್ ಧ್ವಜಾರೋಹಣ ನೆರವೇರಿಸಿದರುಖತೀಬರಾದ ಅಲ್ ಹಾಜ್ ಅಶ್ರಫ್ ಖಾಮಿಲ್ ಸಖಾಫಿ ದುವಾ ಪ್ರಾರ್ಥನೆ ಮಾಡಿದರುಮುದರ್ರಿಸರಾದ ಶಿಹಾಬುದ್ದೀನ್...

ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಜ್ಯೋತಿ ಪ್ರೌಢಶಾಲೆ ಪೆರಾಜೆ ಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ವಿಜೃಂಭಣೆಯಿಂದ ನಡೆಯಿತು. ರಾಷ್ಟ್ರಧ್ವಜಾರೋಹಣವನ್ನು ಜ್ಯೋತಿ ವಿದ್ಯಾಸಂಘದ ನಿರ್ದೇಶಕರಾದ ಶ್ರೀ ಎನ್ ಈ ರಾಮಚಂದ್ರ ನೆರವೇರಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಯೋತಿ ವಿದ್ಯಾ ಸಂಘದ ಅಧ್ಯಕ್ಷರಾದ ಶ್ರೀ ರಾಕೇಶ್ ರೈ ಅವರು ವಹಿಸಿದ್ದರು . ಮುಖ್ಯ ಶಿಕ್ಷಕರಾದ ಶ್ರೀ ಜಿ ಆರ್ ನಾಗರಾಜ್ ಅವರು ಸರ್ವರನ್ನು ಸ್ವಾಗತಿಸಿದರು ಕಾರ್ಯಕ್ರಮಕ್ಕೆ...

ಬಾಳುಗೋಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬಾಳುಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬಾಳುಗೋಡಿನಿಂದ ಬಸವನಗುಡಿ ಕೆ.ವಿ ಗೌಡ ಸರ್ಕಲ್ ವರೆಗೆ ಮೆರವಣಿಗೆ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಚಂದ್ರಹಾಸ ಶಿವಾಲ ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಬಿ.ಆರ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಎಸ್.ಡಿ.ಎಂ.ಸಿ...

ಮರ್ದೂರಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ

ಮರ್ದೂರಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಜಯಪ್ರಕಾಶ್ ಬಲ್ಕಾಡಿ ಧ್ವಜಾರೋಹಣ ನೆರವೇರಿಸಿದರು. ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿದ್ಯಾ ಅಭಿಮಾನಿಗಳು ಸೇರಿ ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಆನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಶಿಕ್ಷಕ ಬಾಲಕೃಷ್ಣ ಮರ್ದೂರು, ಕೃಷಿಕರಾದ ಅಶೋಕ್ ರೈ ಮರ್ದೂರು, ನಿವೃತ್ತಿ ಅಂಗನವಾಡಿ...
Loading posts...

All posts loaded

No more posts

error: Content is protected !!