ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಸದಸ್ಯ ಕೃಷಿಕರಿಗೆ ಕಾಫಿ, ಕಾಳುಮೆಣಸು ಗಿಡ ವಿತರಣೆ

ಸುಳ್ಯ : ಎಲೆಚುಕ್ಕಿ ರೋಗದಿಂದ ಅಡಿಕೆ ಬೆಳೆ ಹಾನಿಗೊಳಗಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಪರ್ಯಾಯ ಬೆಳೆಯಾಗಿ ಕಾಫಿ ಮತ್ತು ಕಾಳುಮೆಣಸು ಬೆಳೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಗಿಡಗಳನ್ನು ವಿತರಿಸಲಾಗುತ್ತಿದೆ ಎಂದು ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿಕ್ರಂ ಅಡ್ಪಂಗಾಯ ಹೇಳಿದರು.

. . . . . . . . .

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ಸದಸ್ಯ ಕೃಷಿಕರಿಗೆ ಕಾಫಿ ಹಾಗೂ ಕಾಳುಮೆಣಸು ಗಿಡ ವಿತರಣೆ ಕಾರ್ಯಕ್ರಮ ಸೆ. 2ರಂದು ಬಿಜೆಪಿ ಮಂಡಲ ಕಾರ್ಯಾಲಯದ ಪ್ರಾಂಗಣದಲ್ಲಿ ನಡೆಯಿತು.

. . . . . . .

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಗಿಡ ವಿತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ಪರ್ಯಾಯ ಬೆಳೆಯಾಗಿ ಕಾಳುಮೆಣಸು ಮತ್ತು ಕಾಫಿ ಗಿಡಗಳನ್ನು ವಿತರಿಸುವ ಮೂಲಕ ಸಹಕಾರ ಸಂಘವು ರೈತರಿಗೆ ನೆರವಾಗುತ್ತಿರುವುದು ಶ್ಲಾಘನೀಯ. ಕಾಡುಪ್ರಾಣಿಗಳ ಹಾವಳಿಯಿಂದ ಸಂಕಷ್ಟ ಅನುಭವಿಸುತ್ತಿರುವ ರೈತರಿಗೆ ಪರ್ಯಾಯ ಬೆಳೆಗಳು ಆಶಾದಾಯಕವಾಗಲಿ” ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಗಿಡಗಳನ್ನು ಒದಗಿಸಿದ ನರ್ಸರಿ ಮಾಲಕ ಇಬ್ರಾಹಿಂ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಿಎ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಸುಬೋಧ್ ಶೆಟ್ಟಿ ಮೇನಾಲ, ನಿರ್ದೇಶಕರಾದ ಪ್ರಮೋದ್ ಶೆಟ್ಟಿ, ಕೇಶವ ಮಾಸ್ಟರ್ ಹೊಸಗದ್ದೆ, ರಾಜೇಶ್ ಶೆಟ್ಟಿ ಮೇನಾಲ, ನವ್ಯ ಎ.ಸಿ., ಹರಿಣಾಕ್ಷಿ ಬಿ., ಶಿವರಾಮ ಕೆ., ಬಾಲಗೋಪಾಲ ಎಂ., ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಎನ್.ಎ. ರಾಮಚಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading