ಸುಳ್ಯ ಪೊಲೀಸ್ ಠಾಣೆಯ ನೂತನ ಸಬ್‌ಇನ್ಸ್‌ಪೆಕ್ಟರ್ ಉದಯ ರವಿಗೆ ಆಟೋ ಚಾಲಕರ ಸಂಘದಿಂದ ಸ್ವಾಗತ

ಸುಳ್ಯ: ಸುಳ್ಯ ಪೊಲೀಸ್ ಠಾಣೆಗೆ ನೂತನವಾಗಿ ಆಗಮಿಸಿದ ಸಬ್‌ಇನ್ಸ್‌ಪೆಕ್ಟರ್ ಉದಯ ರವಿ ಅವರನ್ನು ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ.) ಬಿಎಂಎಸ್ ಸಂಯೋಜಿತ ಸುಳ್ಯ ದ.ಕ. ವತಿಯಿಂದ ಸ್ವಾಗತಿಸಿ ಅಭಿನಂದಿಸಲಾಯಿತು.

. . . . . . . . .

ಸಂಘದ ಅಧ್ಯಕ್ಷ ಪ್ರಕಾಶ್ ಎಂ.ಎಸ್. ಅವರು ಸಬ್‌ಇನ್ಸ್‌ಪೆಕ್ಟರ್ ಉದಯ ರವಿ ಅವರಿಗೆ ಹೂಗುಚ್ಛ ನೀಡಿ ಶುಭಾಶಯ ಕೋರಿದರು. ಇದೇ ಸಂದರ್ಭದಲ್ಲಿ ಸಹೋದರತೆ ಹಾಗೂ ಸೌಹಾರ್ದತೆಯ ಸಂಕೇತವಾದ ರಕ್ಷಾ ಬಂಧನವನ್ನು ಕಟ್ಟಿ ಬಾಂಧವ್ಯ ಸಾರಲಾಯಿತು.

. . . . . . .

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಾರಾಯಣ ಎಸ್.ಎಂ., ಕೋಶಾಧಿಕಾರಿ ರವಿ ಎಸ್., ಕಾನೂನು ಸಲಹೆಗಾರ ಭಾಸ್ಕರ್ ರಾವ್, ಸಂಘಟನಾ ಕಾರ್ಯದರ್ಶಿ ಸುಂದರ್ ಪೆರಾಜೆ, ಜಂಟಿ ಕಾರ್ಯದರ್ಶಿ ಸುರೇಂದ್ರ ಕಾಮತ್, ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ನಿರ್ದೇಶಕರಾದ ಭಾನು ಪ್ರಕಾಶ್, ಹರೀಶ್ ನೆಕ್ರಾಜೆ, ಪ್ರಸನ್ನ ರಥಬೀದಿ, ಲೋಕೇಶ್ ಬಸ್ ನಿಲ್ದಾಣ ಹಾಗೂ ಚಾಮಯ್ಯ ಮಾರ್ಕೆಟ್ ರಸ್ತೆ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading