ಸೆ.05ರಂದು ಸುಳ್ಯದಲ್ಲಿ ಪ್ರಜಾಸೇವೆ ಅಭಿಯಾನ ಸಭೆ

ಸುಳ್ಯ : ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರಜಾಸೇವೆ ಅಭಿಯಾನ ಸಭೆಗಳನ್ನು ಆಯೋಜಿಸಲಾಗುತ್ತಿದೆ.

. . . . . . . . .

ಸರ್ಕಾರದ ಸುತ್ತೋಲೆಗಳಂತೆ ಪ್ರತೀ ಜಿಲ್ಲೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರತೀ ತಿಂಗಳ ಎಲ್ಲಾ ಶನಿವಾರಗಳಂದು ಪ್ರಜಾಸೇವೆ ಅಭಿಯಾನ ಸಭೆಗಳನ್ನು ನಡೆಸಲು ಮಾರ್ಗಸೂಚಿ ನೀಡಲಾಗಿದೆ. ಇದರಂತೆ ರಾಜ್ಯಾದ್ಯಂತ ಪ್ರಜಾಸೇವೆ ಅಭಿಯಾನ ಸಭೆಗಳು ಸೆಪ್ಟೆಂಬರ್ 5ರಿಂದ ಆರಂಭಗೊಳ್ಳಲಿವೆ.

. . . . . . .

ಈ ಹಿನ್ನೆಲೆಯಲ್ಲಿ ಸೆ.05ರಂದು ಪೂರ್ವಾಹ್ನ 11:30ಕ್ಕೆ ಸುಳ್ಯ ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ ಸಭೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಸಭೆಯು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಾರ್ವಜನಿಕರು ತಮ್ಮ ಕುಂದುಕೊರತೆಗಳು ಹಾಗೂ ಸಮಸ್ಯೆಗಳನ್ನು ಸಭೆಯಲ್ಲಿ ಮಂಡಿಸಿ ಪರಿಹಾರ ಪಡೆಯಲು ಅವಕಾಶವಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading