ಮಡಪ್ಪಾಡಿ ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿಯ ವಿರುದ್ಧ ಪ್ರತಿಭಟನೆ ; ಗ್ರಾಮ ಆಡಳಿತಾಧಿಕಾರಿಗಳಿಗೆ ಆಕ್ಷೇಪಣಾ ಪತ್ರ ಸಲ್ಲಿಕೆ

ಕಸ್ತೂರಿ ರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮವಲಯ ಘೋಷಣೆಯ ವಿರುದ್ಧ ಮಡಪ್ಪಾಡಿ ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಸೆ.03ರಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಬಳಿಕ ಗ್ರಾಮ ಆಡಳಿತಾಧಿಕಾರಿಗಳಿಗೆ ಆಕ್ಷೇಪಣಾ ಪತ್ರ ಸಲ್ಲಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಕಸ್ತೂರಿ ರಂಗನ್ ವರದಿಯ ವಿರುದ್ಧದ ಹೋರಾಟವನ್ನು ಕಾನೂನುಬದ್ಧ ಹಾಗೂ ಪ್ರಜಾಪ್ರಭುತ್ವದ ಮಾರ್ಗದಲ್ಲಿ ಮುಂದುವರಿಸಲಾಗುವುದು ಎಂದು ಹೇಳಿದರು. ರೈತರ ಹಕ್ಕು, ಭೂಮಿ ಹಾಗೂ ಜೀವನೋಪಾಯದ ರಕ್ಷಣೆಗೆ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕೆಂದು ಕರೆ ನೀಡಿದರು. ಪಶ್ಚಿಮ ಘಟ್ಟದ ಗಡಿಯನ್ನು ವೈಜ್ಞಾನಿಕವಾಗಿ ಹಾಗೂ ಸ್ಪಷ್ಟವಾಗಿ ಗುರುತಿಸಿ, ಜನವಸತಿ ಪ್ರದೇಶಗಳು ಮತ್ತು ಕೃಷಿ ಭೂಮಿಗಳಿಗೆ ಅನಗತ್ಯ ನಿರ್ಬಂಧಗಳು ಬಾರದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಲೆನಾಡಿನಲ್ಲಿ ಹೆಚ್ಚುತ್ತಿರುವ ಆನೆ ದಾಳಿಗಳು ಹಾಗೂ ಕಾಡುಪ್ರಾಣಿಗಳ ಹಾವಳಿಯಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಗಮನ ಸೆಳೆಯಲಾಯಿತು. ಕಾಡುಪ್ರಾಣಿಗಳಿಂದ ಕೃಷಿ ಬೆಳೆಗಳಿಗೆ ಆಗುತ್ತಿರುವಂತಹ ನಷ್ಟಕ್ಕೆ ಶಾಶ್ವತ ಪರಿಹಾರ ಕಲ್ಪಿಸಿ ರೈತರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಯಿತು. ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮವಲಯ ಘೋಷಣೆಯ ವಿಚಾರದಲ್ಲಿ ಸ್ಥಳೀಯ ಜನರ ಅಭಿಪ್ರಾಯವನ್ನು ಪರಿಗಣಿಸಿ ಕೃಷಿಕರು, ಭೂಮಾಲಿಕರು ಹಾಗೂ ಗ್ರಾಮಸ್ಥರ ಹಿತಾಸಕ್ತಿಯನ್ನು ರಕ್ಷಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ರೈತರು, ಗ್ರಾಮಸ್ಥರು, ಜನಪ್ರತಿನಿಧಿಗಳು, ಪ್ರಮುಖರು ಹಾಗೂ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಮುಖರು, ತಾಲೂಕು ವಲಯ ಪ್ರಮುಖರು, ಗ್ರಾಮದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading