ದರ್ಬೆ ಪ್ರಕರಣ: ಸಂತ್ರಸ್ತರ ಮನೆಗೆ ಎಸ್‌ಡಿಪಿಐ ಜಿಲ್ಲಾ ನಾಯಕರ ಭೇಟಿ

ಸುಳ್ಯ: ಪುತ್ತೂರಿನ ದರ್ಬೆ ಪ್ರಕರಣದಲ್ಲಿ ಹಲ್ಲೆಗೊಳಗಾದ ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳುವ ಸಲುವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ಜಿಲ್ಲಾ ನಾಯಕರ ತಂಡವು ಸುಳ್ಯದ ಮಂಡೆಕೋಲಿನಲ್ಲಿರುವ ಸಂತ್ರಸ್ತರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

. . . . . . . . .

ಈ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬದ ಸದಸ್ಯರೊಂದಿಗೆ ಪ್ರಕರಣದ ಕುರಿತು ಚರ್ಚಿಸಿದ ಎಸ್‌ಡಿಪಿಐ ನಾಯಕರು, ಪಕ್ಷವು ಕುಟುಂಬದ ಬೆಂಬಲಕ್ಕೆ ಸಂಪೂರ್ಣವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂದಿನ ಕಾನೂನು ಹಾಗೂ ಸಾಮಾಜಿಕ ಹೋರಾಟಗಳ ಬಗ್ಗೆಯೂ ಚರ್ಚೆ ನಡೆಸಿದರು.

. . . . . . .

ಭೇಟಿಯ ಸಂದರ್ಭದಲ್ಲಿ ಯಂಗ್ ಡೆಮಾಕ್ರಟ್ಸ್ ರಾಜ್ಯ ಜಾಯಿಂಟ್ ಕನ್ವೀನರ್ ಮೂನಿಷ್ ಅಲಿ ಬಂಟ್ವಾಳ, ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮೀರಝ್ ಸುಳ್ಯ, ಸುಳ್ಯ ನಗರ ಸಮಿತಿ ಕಾರ್ಯದರ್ಶಿ ಸುಹೇಲ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಸಂತ್ರಸ್ತ ಕುಟುಂಬದ ಸದಸ್ಯ ಕಲಂದರ್, ಮುಬಾರೀಶ್, ಅರಿಸ್, ಮಿಸ್ಬಾ, ಸಿದ್ಧಿಕ್ ಹಾಗೂ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading