ಶಿಕ್ಷಕರ ದಿನಾಚರಣೆ: ಯೂನಿಯನ್ ಬ್ಯಾಂಕ್ ಸುಳ್ಯ ವತಿಯಿಂದ ಗ್ರೀನ್ ವ್ಯೂ ಶಿಕ್ಷಕರಿಗೆ ಗೌರವ, ವಿದ್ಯಾರ್ಥಿಗಳಿಗೆ ಬಹುಮಾನ

ಸುಳ್ಯ: ಶಿಕ್ಷಕರ ದಿನಾಚರಣೆಯ ಅಂಗವಾಗಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸುಳ್ಯ ಶಾಖೆಯ ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿ ವರ್ಗದವರು ಗ್ರೀನ್ ವ್ಯೂ ಶಾಲೆಗೆ ಭೇಟಿ ನೀಡಿ ಶಿಕ್ಷಕರಿಗೆ ಗೌರವ ಸಲ್ಲಿಸಿ, ಬಹುಮಾನಗಳನ್ನು ನೀಡಿ ಶುಭ ಹಾರೈಸಿದರು.

. . . . . . . . .

ಈ ಸಂದರ್ಭದಲ್ಲಿ ಕಲಿಕೆಯಲ್ಲಿ ತರಗತಿವಾರು ಅತೀ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ಕೊನೆಯಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸುಳ್ಯ ಶಾಖೆಯ ಬ್ಯಾಂಕ್ ಮ್ಯಾನೇಜರ್ ಗುರುಪ್ರಸಾದ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಶೀಲಾ ಅವರನ್ನು ಶಾಲಾ ವತಿಯಿಂದ ಮುಖ್ಯೋಪಾಧ್ಯಾಯ ಇಲ್ಯಾಸ್ ಕಾಶಿಪಟ್ಣ ಹಾಗೂ ಸಿಬ್ಬಂದಿ ವರ್ಗದವರು ಆತ್ಮೀಯವಾಗಿ ಅಭಿನಂದಿಸಿದರು.
ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬ್ಯಾಂಕ್ ವತಿಯಿಂದ ಹಮ್ಮಿಕೊಂಡ ಈ ಕಾರ್ಯಕ್ರಮಕ್ಕೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಮೆಚ್ಚುಗೆ ವ್ಯಕ್ತಪಡಿಸಿದರು.

. . . . . . .

ಶಿಕ್ಷಕ ರಂಜಿತ್ ಸ್ವಾಗತಿಸಿ, ಶಿಕ್ಷಕ ಪೀರ್ ಸಾಬ್ ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading