ಸುಳ್ಯ ತಾಲೂಕು ಖಾಸಗಿ ಶಾಲಾ ಮುಖ್ಯ ಶಿಕ್ಷಕರ ಪದಾಧಿಕಾರಿಗಳ ಆಯ್ಕೆ

ಸೆಪ್ಟೆಂಬರ್ 05 ಶಿಕ್ಷಕರ ದಿನಾಚರಣೆಯಂದು ಪೂರ್ವಾಹ್ನ 9:00 ಗಂಟೆಗೆ ಕೆ.ಪಿ.ಎಸ್ ಸುಳ್ಯ ದಲ್ಲಿ ನಡೆದ ಖಾಸಗಿ ಶಾಲಾ ಶಿಕ್ಷಕರ ಸಂಘದ ಸಭೆಯಲ್ಲಿ ಸಂಘದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಜ್ಞಾನದೀಪ ವಿದ್ಯಾಸಂಸ್ಥೆ, ಎಲಿಮಲೆಯ ಮುಖ್ಯಶಿಕ್ಷಕರಾದ ಗದಾಧರ ಬಾಳುಗೋಡು ಇವರನ್ನು ಸರ್ವಾನುಮತಿಯಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರುಗಳಾಗಿ ಕುಮಾರಸ್ವಾಮಿ ವಿದ್ಯಾಲಯದ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ ಹಾಗೂ ಶ್ರೀ ಭಗವಾನ್ ಸತ್ಯಸಾಯಿ ವಿದ್ಯಾಕೇಂದ್ರದ ಮುಖ್ಯ ಶಿಕ್ಷಕ ಶ್ರೀ ವೆಂಕಟಗಿರಿ, ಪ್ರಧಾನ ಕಾರ್ಯದರ್ಶಿಯಾಗಿ ರೋಟರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಶೇಡಿಕಜೆ, ಜತೆ ಕಾರ್ಯದರ್ಶಿಗಳಾಗಿ ಕೆ.ಎಸ್. ಗೌಡ ನಿಂತಿಕಲ್ಲು ಇಲ್ಲಿನ ಮುಖ್ಯ ಶಿಕ್ಷಕರಾದ ಶ್ರೀ ಉಮೇಶ್ ಗೌಡ. ಎಚ್., ಕೋಶಾಧಿಕಾರಿಯಾಗಿ ರೋಟರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜ್ಯೋತ್ಸ್ನ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading