ಅರಿವಿಗೆ, ಬದುಕಿಗೆ ಶಿಕ್ಷಣ ಅಗತ್ಯ: ಡಾ. ಮಾಧವ ಭಟ್ | ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಸುಳ್ಯ: ಇನ್ನೊಬ್ಬರನ್ನು ಪ್ರೀತಿಸಬೇಕಾದರೆ ನಮ್ಮಲ್ಲಿ ಅಹಂ ಹಾಗೂ ಸ್ವಾರ್ಥ ಇರಬಾರದು. ಒಮ್ಮೆ ಬಳಸಿ ಬಿಸಾಡುವ ಶಿಕ್ಷಣ ನಮ್ಮದಲ್ಲ. ಭಾರತದಲ್ಲಿ ಜ್ಞಾನ ಪವಿತ್ರವಾದುದು. ವ್ಯವಸ್ಥಿತ ಶಿಕ್ಷಣದ ಮೂಲಕ ಮಕ್ಕಳು ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಬೆಳೆಸಿಕೊಂಡು ರೆಕ್ಕೆ ಬಿಚ್ಚಿ ಹಾರುವಂತಾಗಬೇಕು. ಅರಿವಿಗೆ ಮತ್ತು ಬದುಕುವುದಕ್ಕೆ ಶಿಕ್ಷಣ ಅಗತ್ಯ ಎಂದು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಮಾಧವ ಭಟ್ ಹೇಳಿದರು.

. . . . . . . . .

ಸುಳ್ಯದ ಕರ್ನಾಟಕ ಪಬ್ಲಿಕ್ ಶಾಲೆಯ ಜ್ಞಾನಾಮೃತ ಸಭಾಭವನದಲ್ಲಿ ಸೆ. 5ರಂದು ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪದನಿಮಿತ್ತ ತಾಲೂಕು ಯೋಜನಾಧಿಕಾರಿಯವರ ಕಚೇರಿ ಮತ್ತು ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಆಯೋಜಿಸಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

. . . . . . .

ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು ಹಾಗೂ ಶಿಕ್ಷಕೇತರ ನೌಕರರನ್ನು ಸನ್ಮಾನಿಸಲಾಯಿತು. ಸ್ಕೌಟ್‌-ಗೈಡ್ ಕ್ಷೇತ್ರದ ಉತ್ತಮ ಶಿಕ್ಷಕರು, ಎಸ್‌ಎಸ್‌ಎಲ್‌ಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳು, 2025ರಲ್ಲಿ ಜಿಲ್ಲಾ ಪ್ರಶಸ್ತಿ ಪಡೆದ ಶಿಕ್ಷಕರು, ಪೋಷಣ್ ಕಾರ್ಯಕ್ರಮದಡಿ ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿ ಪಡೆದ ಶಾಲೆ ಹಾಗೂ ಸಾಹಿತ್ಯ ಪ್ರಶಸ್ತಿ ವಿಜೇತ ವೈ.ಎಸ್. ಹರಗಿ ಅವರನ್ನು ಸನ್ಮಾನಿಸಲಾಯಿತು.

ತಹಶೀಲ್ದಾರ್ ಮಂಜುಳಾ ಎಂ., ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹಿದ್ ತೆಕ್ಕಿಲ್, ಸೂಡಾ ಅಧ್ಯಕ್ಷ ಕೆ.ಎಂ. ಮುಸ್ತಫ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್. ಹರಗಿ, ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲ್, ಪ್ರಾಂಶುಪಾಲ ಮೋಹನ್ ಬೊಮ್ಮೆಟ್ಟಿ, ಸುಳ್ಯ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಕ್ಷೇತ್ರ ಸಮನ್ವಯಾಧಿಕಾರಿ ಶೀತಲ್ ಯು.ಕೆ., ಪಿ.ಎಂ. ಪೋಷಣ್ ಸಹಾಯಕ ನಿರ್ದೇಶಕಿ ವೀಣಾ ಎಂ.ಟಿ., ದೈಹಿಕ ಶಿಕ್ಷಣ ಪರಿವೀಕ್ಷಕ ಚಂದ್ರಶೇಖರ ಸುವರ್ಣ, ಎಸ್‌ಡಿಎಂಸಿ ಅಧ್ಯಕ್ಷೆ ಮಂಜುಳಾ ಬಡಿಗೇರ್ ಉಪಸ್ಥಿತರಿದ್ದರು.

ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಪ್ರಕಾಶ್ ಮೂಡಿತ್ತಾಯ, ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ದೇವರಾಜ್ ಎಸ್.ಎ., ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುನಿಲ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಮಿತಿ ಅಧ್ಯಕ್ಷ ದಿನೇಶ್ ಗೌಡ ಕೆ., ಪ್ರೌಢಶಾಲಾ ಶಿಕ್ಷಕರ ಸಮಿತಿ ಅಧ್ಯಕ್ಷ ಚಂದ್ರಶೇಖರ ಕೆ.ಎಸ್., ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಧನಂಜಯ ಎಂ., ದೈಹಿಕ ಶಿಕ್ಷಣ ಶಿಕ್ಷಕರ (ಗ್ರೇಡ್-1) ಸಂಘದ ಅಧ್ಯಕ್ಷ ಮಹಾಬಲ, ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ ಎಣ್ಮೂರು, ಲಿಪಿಕ ನೌಕರರ ಮತ್ತು ವಾಹನ ಚಾಲಕರ ಸಂಘದ ಅಧ್ಯಕ್ಷ ವಿಜೇತ್ ಮತ್ತಿತರರು ಉಪಸ್ಥಿತರಿದ್ದರು.
ಕಾಂತಮಂಗಲ ಸ.ಉ.ಹಿ. ಶಾಲೆಯ ಶಿಕ್ಷಕಿ ಆಶಾ ಅಂಬೆಕಲ್ಲು ಹಾಗೂ ಸುಳ್ಯ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕಿ ಮಮತಾ ಎಂ.ಜೆ. ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading