ಸುಳ್ಯದ ಜಯನಗರ ಮಿಲಿಟರಿ ಗ್ರೌಂಡ್ ಸ್ಥಳ ವೀಕ್ಷಣೆ ಮಾಡಿದ ಸಂಸದ ಚೌಟ

ಸುಳ್ಯ: ಸುಳ್ಯದ ಜಯನಗರದ ಮಿಲಿಟರಿ ಗ್ರೌಂಡ್‌ನ ನಿವಾಸಿಗಳ ಅಡಿಸ್ಥಳವನ್ನು ದಾಖಲುಗೊಳಿಸುವ ವಿಚಾರವಾಗಿ ಕಳೆದ 12 ವರ್ಷಗಳಿಂದ ನಿವಾಸಿಗಳು ಹೋರಾಟ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸೆ. 5ರಂದು ಸ್ಥಳ ವೀಕ್ಷಣೆ ನಡೆಸಿದರು.

. . . . . . . . .

ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಕಡತ ಪರಿಶೀಲನೆಯ ಹಂತದಲ್ಲಿರುವ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದರು, ಪುತ್ತೂರು ಸಹಾಯಕ ಆಯುಕ್ತರು, ಸುಳ್ಯ ತಹಶೀಲ್ದಾರ್, ನಗರ ಪಂಚಾಯತ್ ಮುಖ್ಯಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿದರು.

. . . . . . .

ಬಳಿಕ ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಂಸದರು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿರುವ ಕಡತವನ್ನು ತಕ್ಷಣ ಪರಿಶೀಲಿಸಿ, ಅಡಿಸ್ಥಳ ಮಂಜೂರು ಮಾಡಿಕೊಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್, ಸುಳ್ಯ ತಹಶೀಲ್ದಾರ್ ಮಂಜುಳಾ ಎಂ., ನಗರ ಪಂಚಾಯತ್ ಮುಖ್ಯಾಧಿಕಾರಿ ಬಸವರಾಜ್, ತಾಲೂಕು ಭೂಮಾಪಕ ಜಗದೀಶ್, ಗ್ರಾಮ ಲೆಕ್ಕಾಧಿಕಾರಿ ತಿಪ್ಪೇಶ್, ಉಪ ತಹಶೀಲ್ದಾರ್ ಚಂದ್ರಶೇಖರ್, ನಗರ ಪಂಚಾಯತ್ ಇಂಜಿನಿಯರ್ ವೆಂಕಟೇಶ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್. ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ನಗರ ಬಿಜೆಪಿ ಅಧ್ಯಕ್ಷ ಕುಸುಮಾಧರ ಎ.ಟಿ., ಕಾರ್ಯದರ್ಶಿ ನಾರಾಯಣ ಶಾಂತಿನಗರ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪುಷ್ಪಾ ಮೇದಪ್ಪ, ಮಂಡಲ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಜಯನಗರ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ರಂಜಿತ್ ಕುಮಾರ್ ಕೆ.ಆರ್., ಜಯನಗರ ಹಕ್ಕೊತ್ತಾಯ ಸಮಿತಿ ಸಂಚಾಲಕ ಹಾಗೂ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಿ. ಜಗನ್ನಾಥ್, ಜಯನಗರದ ರಾಧಾಕೃಷ್ಣ ನಾಯಕ್ ಕೆ.ವಿ. ಸೇರಿದಂತೆ ಊರಿನ ಪ್ರಮುಖರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading