ಶ್ರೀ ಶಾರದ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ | ಆರೋಗ್ಯವಂತ ಯುವಜನತೆಯೇ ಸದೃಢ ಸಮಾಜದ ನಿರ್ಮಾಣಕ್ಕೆ ಬುನಾದಿ: ಡಾ. ಅನುರಾಧಾ ಕುರುಂಜಿ

ಸುಳ್ಯ: ಆರೋಗ್ಯವಂತ ಯುವಜನತೆಯೇ ಸದೃಢ ಸಮಾಜದ ನಿರ್ಮಾಣಕ್ಕೆ ಬುನಾದಿಯಾಗಿದ್ದು, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಅನುರಾಧಾ ಕುರುಂಜಿ ಹೇಳಿದರು.

. . . . . . . . .

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಜ್ಜಾವರ ವಲಯ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅಜ್ಜಾವರ ಇವರ ಸಂಯುಕ್ತ ಆಶ್ರಯದಲ್ಲಿ ಸೆ. 3ರಂದು ಸುಳ್ಯದ ಶ್ರೀ ಶಾರದ ಪ್ರೌಢಶಾಲೆಯಲ್ಲಿ ನಡೆದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

. . . . . . .

ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದ ಹಂತವಾಗಿದ್ದು, ಈ ಅವಧಿಯಲ್ಲಿ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಹದಿಹರೆಯದವರು ಬೀಡಿ, ಸಿಗರೇಟ್, ತಂಬಾಕು, ಗಾಂಜಾ ಹಾಗೂ ಮದ್ಯಪಾನದಂತಹ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ದುಶ್ಚಟಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರೊಂದಿಗೆ ಅವರ ಭವಿಷ್ಯವನ್ನೂ ಹಾಳು ಮಾಡುತ್ತವೆ ಎಂದರು.

ದೈಹಿಕ, ಮಾನಸಿಕ, ಭಾವನಾತ್ಮಕ, ಸಾಮಾಜಿಕ ಹಾಗೂ ಧಾರ್ಮಿಕವಾಗಿ ಸ್ವಸ್ಥರಾಗುವುದರ ಜೊತೆಗೆ ಸ್ವಾಮಿ ವಿವೇಕಾನಂದರಂತಹ ಯುವ ನಾಯಕರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಆದರ್ಶ ಪ್ರಜೆಗಳಾಗಿ ರೂಪುಗೊಳ್ಳಬೇಕು. ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಾರತಿಯವರು ವಹಿಸಿದ್ದರು. ತಾಲೂಕಿನ ಕೇಂದ್ರ ಒಕ್ಕೂಟ ಸಮಿತಿ ಅಧ್ಯಕ್ಷ ಹಾಗೂ ಜನಜಾಗೃತಿ ವಲಯ ಅಧ್ಯಕ್ಷ ಸುರೇಶ್ ಕಣೆಮರಡ್ಕ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಬಳಿಕ ಡಾ. ಅನುರಾಧಾ ಕುರುಂಜಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಜನಜಾಗೃತಿ ಸದಸ್ಯ ಸುಬ್ಬಪಾಟಾಲಿ, ಕಾಂತಮಂಗಲ ಒಕ್ಕೂಟದ ಅಧ್ಯಕ್ಷ ಸತೀಶ್ ಹಾಗೂ ಜನಜಾಗೃತಿ ಸದಸ್ಯರು ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಭವ್ಯ ಸ್ವಾಗತಿಸಿದರು. ಸೇವಾ ಪ್ರತಿನಿಧಿ ವೇದಾವತಿ ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading