ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ, ಕವಿಗೋಷ್ಠಿ | ಸಮಾಜಸೇವೆಯಲ್ಲಿ ತೊಡಗಿರುವ ಹಿರಿಯ ಶಿಕ್ಷಕರನ್ನು ಗೌರವಿಸುವುದು ಪವಿತ್ರ ಕಾರ್ಯ: ಡಾ. ತಾಳ್ತಜೆ ವಸಂತ ಕುಮಾರ್

ಶಿಕ್ಷಕ ವೃತ್ತಿಯು ಉದಾತ್ತ ಹಾಗೂ ಪವಿತ್ರವಾದುದಾಗಿದ್ದು, ಮಾನವ ಸಂಪನ್ಮೂಲದ ಸೃಜನಶೀಲತೆಗೆ ಮಹತ್ವದ ಕೊಡುಗೆ ನೀಡುವ ಕಾಯಕವಾಗಿದೆ. ಶಿಕ್ಷಕ ವೃತ್ತಿಯನ್ನು ಕೇವಲ ಉದ್ಯೋಗವೆಂದು ಪರಿಗಣಿಸದೆ ಸಮಾಜಸೇವೆಯ ಕಾರ್ಯವೆಂದು ಭಾವಿಸಿ ಕರ್ತವ್ಯ ನಿರ್ವಹಿಸಿದಾಗ ಅವರು ನಿಜವಾದ ಆಚಾರ್ಯರಾಗುತ್ತಾರೆ ಎಂದು ಮುಂಬಯಿ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ತಾಳ್ತಜೆ ವಸಂತ ಕುಮಾರ್ ಹೇಳಿದರು.

. . . . . . . . .

ಜಿ.ಎಲ್. ಆಚಾರ್ಯ ಸಂಸ್ಮರಣೆಯ ಅಂಗವಾಗಿ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಪುತ್ತೂರಿನ ಜಿ.ಎಲ್. ಆಚಾರ್ಯ ಸಭಾಂಗಣದಲ್ಲಿ ಸೆ. 7ರಂದು ನಡೆದ ಆಚಾರ್ಯ ಪುರಸ್ಕಾರ ಹಾಗೂ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಆಚಾರ್ಯ ಸಂದೇಶ ನೀಡಿ ಅವರು ಮಾತನಾಡಿದರು.

. . . . . . .

ತತ್ವಜ್ಞಾನಿ ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕ ಸಮುದಾಯಕ್ಕೆ ಆದರ್ಶಪ್ರಾಯರಾಗಿದ್ದಾರೆ. ಅವರ ಜನ್ಮದಿನದ ಅಂಗವಾಗಿ ಸಮಾಜ ಹಾಗೂ ರಾಷ್ಟ್ರಸೇವೆಯಲ್ಲಿ ತೊಡಗಿಸಿಕೊಂಡಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯವಾಗಿದೆ ಎಂದು ಅವರು ಹೇಳಿದರು.

ಜಿ.ಎಲ್. ಸಮೂಹ ಸಂಸ್ಥೆಗಳ ಅಧ್ಯಕ್ಷ ಬಲರಾಮ ಆಚಾರ್ಯ ಮಾತನಾಡಿ, ಜಿ.ಎಲ್. ಆಚಾರ್ಯರು ಉದ್ಯಮದ ಜೊತೆಗೆ ಸಮಾಜಸೇವೆಗೆ ಆದ್ಯತೆ ನೀಡುತ್ತಿದ್ದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿಯೂ ವಿಶೇಷ ಆಸಕ್ತಿ ಹೊಂದಿದ್ದರು ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ನಿವೃತ್ತಿಯ ಬಳಿಕವೂ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ, ನಿವೃತ್ತ ಶಿಕ್ಷಕ ಪೆರಾಜೆ ಸೀತಾರಾಮ ಭಟ್, ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲ್ ಹಾಗೂ ವಿವೇಕಾನಂದ ಕಾಲೇಜಿನ ನಿವೃತ್ತ ಗಣಿತ ಉಪನ್ಯಾಸಕಿ ಪ್ರೊ. ವತ್ಸಲಾ ರಾಜ್ಞಿ ಅವರನ್ನು ಆಚಾರ್ಯ ಪುರಸ್ಕಾರ ನೀಡಿ ಗೌರವಿಸಲಾಯಿತು.

ಜಿ.ಎಲ್. ಆಚಾರ್ಯ ಜ್ಯುವೆಲರ್ಸ್‌ನ ಲಕ್ಷ್ಮೀಕಾಂತ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕೇರಳ ರಾಜ್ಯ ಕ.ಚು.ಸಾ.ಪ.ಯ ಕರ್ನಾಟಕ ರಾಜ್ಯ ಸಂಚಾಲಕ ಜಯಾನಂದ ಪೆರಾಜೆ ಪ್ರಸ್ತಾವನೆಗೈದರು. ಕ.ಚು.ಸಾ.ಪ. ರಾಜ್ಯ ಉಪಾಧ್ಯಕ್ಷೆ ಡಾ. ಶಾಂತ ಪುತ್ತೂರು ಉಪಸ್ಥಿತರಿದ್ದರು.

ಶಿಕ್ಷಕ ನಾರಾಯಣ ನಾಯ್ಕ್ ಪುಣಚ ಸ್ವಾಗತಿಸಿದರು. ಶಿಕ್ಷಕರಾದ ಪೂರ್ಣಿಮಾ ಪೆರ್ಲಂಪಾಡಿ, ಮಲ್ಲಿಕಾ ಜೆ. ರೈ, ನಳಿನಿ ಡಿ., ಡಾ. ಮೈತ್ರಿ ಭಟ್, ಡಾ. ಗೀತಾ ಕುಮಾರಿ ಹಾಗೂ ಹೇಮಲತಾ ಕಜೆಗದ್ದೆ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು. ಶಿಕ್ಷಕಿ ಯಶುಭ ರೈ ಪ್ರಾರ್ಥಿಸಿ, ಶಿಕ್ಷಕಿ ಪುಷ್ಪಲತಾ ಎಂ. ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading