ಗಾಂಧಿ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ (ರಿ.) ಸುಳ್ಯ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಹಯೋಗದಲ್ಲಿ ಅಕ್ಟೋಬರ್‌ 2ರಂದು ನಡೆಯಲಿರುವ ಗಾಂಧಿ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆ ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

. . . . . . . . .

ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವಿಶ್ವನಾಥ ರೈ ಕಳಂಜ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಎನ್‌.ಎ. ರಾಮಚಂದ್ರ ಉದ್ಘಾಟಿಸಿದರು. ಸಭೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಆಯೋಜಿಸಲಾಗುವ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು.

. . . . . . .

ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ 12 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ಜಿಲ್ಲಾಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಸುಳ್ಯ ತಾಲೂಕು ಅಧ್ಯಕ್ಷ ವೆಂಕಪ್ಪ ಗೌಡ, ಕಡಬ ತಾಲೂಕು ಅಧ್ಯಕ್ಷ ಇಂದುಶೇಖರ್, ಪುತ್ತೂರು ತಾಲೂಕು ಅಧ್ಯಕ್ಷ ಸತೀಶ್ ನಾಯ್ಕ, ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಸಮಿತಿ ಅಧ್ಯಕ್ಷ ಸುರೇಶ್ ಕಣೆಮರಡ್ಕ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸೋಮಶೇಖರ ಪೈಕ, ಸುಳ್ಯ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಭವಾನಿಶಂಕರ ಅಡ್ತಲೆ, ಮಹೇಶ್ ರೈ ಮೇನಾಲ, ಬೂಡು ರಾಧಾಕೃಷ್ಣ ರೈ, ಲೋಕನಾಥ ಅಮೆಚೂರು, ಕಡಬ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಮಹೇಶ್ ಕುಮಾರ್, ಜಿಲ್ಲಾ ಕೋಆಪ್ಟ್‌ ಸದಸ್ಯರು, ಕಡಬ ಯೋಜನಾಧಿಕಾರಿ ಪ್ರಶಾಂತ್, ಪುತ್ತೂರು ಯೋಜನಾಧಿಕಾರಿ ಶಶಿಧರ್, ತಾಲೂಕು ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಲಯ ಮೇಲ್ವಿಚಾರಕರು, ಶೌರ್ಯ ವಿಪತ್ತು ಘಟಕದ ಮಾಸ್ಟರ್‌ ಮತ್ತು ಕ್ಯಾಪ್ಟನ್‌ಗಳು, ಒಕ್ಕೂಟದ ಅಧ್ಯಕ್ಷರು ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌, ಸುಳ್ಯ ತಾಲೂಕು ಅಧ್ಯಕ್ಷರಾದ ಸವಿತಾ ಸಂದೇಶ್ ಪ್ರಾರ್ಥಿಸಿದರು. ಯೋಜನಾಧಿಕಾರಿ ಮಾಧವ ಗೌಡ ಗಣ್ಯರನ್ನು ಸ್ವಾಗತಿಸಿದರು. ಸಂಪಾಜೆ ವಲಯದ ಮೇಲ್ವಿಚಾರಕ ಹರೀಶ್ ಆಚಾರ್ಯ ವಂದಿಸಿದರು. ಗುತ್ತಿಗಾರು ವಲಯದ ಮೇಲ್ವಿಚಾರಕ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading