ಎಂ.ಜಿ.ಎಂ.: ತಾಲೂಕು ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿದ್ಯಾಬೋಧಿನಿ ಪ್ರೌಢಶಾಲೆಗೆ ಪ್ರಥಮ

ಸುಳ್ಯ, ಸೆ. 9: ಸುಳ್ಯ ತಾಲೂಕು ಪ್ರೌಢಶಾಲಾ ವಿಭಾಗದ ಬಾಲಕ–ಬಾಲಕಿಯರ ಖೋ-ಖೋ ಪಂದ್ಯಾಟವು ಸೆ. 9ರಂದು ಕೊಡಿಯಾಲ ಬೈಲಿನ ಮಹಾತ್ಮ ಗಾಂಧಿ ಮಲ್ನಾಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ನಡೆಯಿತು.
ಪಂದ್ಯಾಟದ ಉದ್ಘಾಟನೆಯನ್ನು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ದಯಾನಂದ ಮುತ್ಲಾಜೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ . ಜಿ.ಎಂ ವಿದ್ಯಾಸಂಸ್ಥೆಯ ಸಂಚಾಲಕರಾದ ಶ್ರೀ ದೊಡ್ಡಣ್ಣ ಬರೆಮೇಲು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ವೈ. ಎಸ್. ಹರಗಿ, ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯದ ಅಧ್ಯಕ್ಷರಾದ ಶ್ರೀ ಕೆ.ಸಿ. ಸದಾನಂದ, ಸಮುದಾಯ ಭವನದ ಅಧ್ಯಕ್ಷರಾದ ಶ್ರೀ ಎ.ವಿ. ತೀರ್ಥರಾಮ, ಎಂ ಜಿ ಎಂ.ವಿದ್ಯಾಸಂಸ್ಥೆಯ ಹಾಲಿ ಸಂಚಾಲಕರಾದ ಶ್ರೀ ಚಂದ್ರ ಕೊಲ್ಚಾರ್, ಗ್ರೇಡ್–1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಪದ್ಮನಾಭ, ಗ್ರೇಡ್–2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಸಂಪಾಜೆ ಹಾಗೂ ಎಂ . ಜಿ.ಜಿ ವಿದ್ಯಾ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.
ಪಂದ್ಯಾಟದಲ್ಲಿ ಬಾಲಕ–ಬಾಲಕಿಯರ ವಿಭಾಗದಲ್ಲಿ ವಿದ್ಯಾಬೋಧಿನಿ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದುಕೊಂಡಿತು. ಬಾಲಕರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಐವರ್ನಾಡು ದ್ವಿತೀಯ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಪಂಜ ದ್ವಿತೀಯ ಸ್ಥಾನ ಪಡೆದುಕೊಂಡಿತು.
ಕಾರ್ಯಕ್ರಮದಲ್ಲಿ ಶಿಕ್ಷಕಿ ಶ್ರೀಮತಿ ಚಿತ್ರಲೇಖ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಅಶ್ವಿನಿ ಮತ್ತು ಶಿಕ್ಷಕಿ ಶ್ರೀಮತಿ ವಿದ್ಯಾಶ್ರೀ ನಿರೂಪಿಸಿದರು. ಎಂ . ಜಿ. ಎಂ ವಿದ್ಯಾ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯಲಕ್ಷ್ಮಿ ವಂದನಾರ್ಪಣೆ ಸಲ್ಲಿಸಿದರು.
ತಾಲೂಕಿನ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದು, ಪಂದ್ಯಾಟವು ಕ್ರೀಡಾಸ್ಫೂರ್ತಿಯೊಂದಿಗೆ ಯಶಸ್ವಿಯಾಗಿ ನಡೆಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading