ವಳಲಂಬೆಯಲ್ಲಿ ಸೆ.14, 15ರಂದು 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಗುತ್ತಿಗಾರು: ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸೆ. 14 ಮತ್ತು 15ರಂದು ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

. . . . . . . . .

ಸೆ. 14ರಂದು ಬೆಳಗ್ಗೆ 9 ಗಂಟೆಗೆ ಗಣಪತಿ ಪ್ರತಿಷ್ಠೆ, 9.15ರಿಂದ ಸಾಮೂಹಿಕ ಗಣಪತಿ ಹವನ ನಡೆಯಲಿದೆ. ಬೆಳಗ್ಗೆ 10ಗಂಟೆಯಿಂದ ಅಕ್ಷರಾಭ್ಯಾಸ ಮತ್ತು ಮಕ್ಕಳಿಗೆ ಕಿವಿ ಚುಚ್ಚುವುದು. ಬೆಳಗ್ಗೆ 10ರಿಂದ ಸಾರ್ವಜನಿಕ ಪುರುಷರಿಗೆ ಮುಕ್ತ ಕಬಡ್ಡಿ ಪಂದ್ಯಾಟ, ಮಹಿಳೆಯರಿಗೆ ಭಕ್ತಿಗೀತೆ, ಬಾಲ್ ಪಾಸಿಂಗ್, ಸಂಗೀತ ಕುರ್ಚಿ, ಹಗ್ಗಜಗ್ಗಾಟ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಜರುಗಲಿದೆ.

. . . . . . .

ಶಾಲಾ ವಿದ್ಯಾರ್ಥಿಗಳಿಗೆ ಭಕ್ತಿಗೀತೆ, ಗಣೇಶನ ಚಿತ್ರ ಬಿಡಿಸುವುದು, ಲಕ್ಕಿ ಗೇಮ್ ಸೇರಿದಂತೆ ವಿವಿಧ ಸ್ಪರ್ಧೆಗಳು ಹಾಗೂ ಅಂಗನವಾಡಿ, ಎಲ್‌ಕೆಜಿ-ಯುಕೆಜಿ ಮಕ್ಕಳಿಗೆ ಬಾಲ್ ಪಾಸಿಂಗ್, ಕಪ್ಪೆ ಜಿಗಿತ ಮತ್ತಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. 60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ವೇಗದ ನಡಿಗೆ, ಲಿಂಬೆ ಚಮಚ ಓಟ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ.

ಸಂಜೆ 6ರಿಂದ 7ರವರೆಗೆ ವಳಲಂಬೆ ಶ್ರೀ ಶಂಖಪಾಲ ಭಜನಾ ಸೇವಾ ಸಮಿತಿ ಹಾಗೂ ಶ್ರೀ ಕೃಷ್ಣ ಭಜನಾ ಮಂಡಳಿ, ಗುತ್ತಿಗಾರು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 6.30ರಿಂದ ವಳಲಂಬೆ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ರಾತ್ರಿ 9ಕ್ಕೆ ಸಭಾ ಕಾರ್ಯಕ್ರಮ ಹಾಗೂ ಧಾರ್ಮಿಕ ಉಪನ್ಯಾಸ ನಡೆಯಲಿದ್ದು, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಕುಸುಮಾಧರ ಎ.ಟಿ. ಉಪನ್ಯಾಸ ನೀಡಲಿದ್ದಾರೆ. ರಾತ್ರಿ 9.30ರಿಂದ ಮೆಟ್ಟಿನಡ್ಕದ ಶ್ರೀ ನಂದನ ಕಲಾ ಕುಟುಂಬದ ಸಾರಥ್ಯದಲ್ಲಿ ‘ಸಾಂಸ್ಕೃತಿಕ ಕಲಾ ವೈಭವ’ ನಡೆಯಲಿದೆ.

ಸೆ.15ರಂದು ಬೆಳಗ್ಗೆ 8.30ರಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ 12ರಿಂದ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 3 ಗಂಟೆಗೆ ಶ್ರೀ ದೇವರ ಮೂರ್ತಿಯ ಶೋಭಾಯಾತ್ರೆ ನಡೆಯಲಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading