ಆಡ್ತಲೆ ಸೆ.13 : ಸ್ಪಂದನ ಗೆಳೆಯರ ಬಳಗದ ವತಿಯಿಂದ 8ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ; ಶ್ರೀಕೃಷ್ಣ ವೇಷ ಸ್ಪರ್ಧೆ ಹಾಗೂ ಸಾರ್ವಜನಿಕರಿಗೆ ವೈವಿಧ್ಯಮಯ ಸ್ಪರ್ಧೆಗಳು ಮತ್ತು ಸನ್ಮಾನ ಕಾರ್ಯಕ್ರಮ

ಸ್ಪಂದನ ಗೆಳೆಯರ ಬಳಗ(ರಿ.) ಅಡ್ತಲೆ ಇವರ ವತಿಯಿಂದ 8ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ಅಡ್ತಲೆ ಶಾಲಾ ವಠಾರದಲ್ಲಿ ಸೆಪ್ಟೆಂಬರ್ 13ನೇ ಆದಿತ್ಯವಾರ ನಡೆಯಲಿದೆ. ಬೆಳಿಗ್ಗೆ ಕಾರ್ಯಕ್ರಮ ಉದ್ಘಾಟನೆಗೊಂಡು ಪುಟಾಣಿಗಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ, ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಹಿರಿಯ ನಾಗರಿಕರಿಗೆ ಮತ್ತು ದಂಪತಿಗಳಿಗೆ ವೈವಿಧ್ಯಮಯ ಸ್ಪರ್ಧೆಗಳು ನಡೆಯಲಿವೆ. ಸಂಜೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಕಿಶೋರ್ ಕುಮಾರ್ ಕಿರ್ಲಾಯ ಇವರಿಗೆ ಸನ್ಮಾನ ನಡೆಯಲಿದೆ. ಊರಿನ ಎಲ್ಲಾ ಸಾರ್ವಜನಿಕ ಬಂಧುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಸ್ಪಂದನ ಗೆಳೆಯರ ಬಳಗದ ಮಾಧ್ಯಮ ಪ್ರಕಟಣೆ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading