ದ.ಕ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್.ಆರ್ ಪೂಜಾರಿ ನೇಮಕ : ಎಐಸಿಸಿ ಆದೇಶ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಹೈಕೋರ್ಟ್ ವಕೀಲ ಹಾಗೂ ಕಳೆದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್.ಆರ್ ಪೂಜಾರಿ ಅವರನ್ನು ಎಐಸಿಸಿ ಹೈಕಮಾಂಡ್ ನೇಮಕ ಮಾಡಿದೆ.ಪಕ್ಷ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಕಾಂಗ್ರೆಸ್ ಇತ್ತೀಚೆಗೆ ‘ಸಂಘಟನ್, ಸಮರ್ಥನ್, ಸೃಜನ್’ ಅಭಿಯಾನವನ್ನು ನಡೆಸಿತ್ತು. ಈ ಅಭಿಯಾನದ ಭಾಗವಾಗಿ ಎಐಸಿಸಿ ನಿಯೋಜಿಸಿದ್ದ ವೀಕ್ಷಕರ ತಂಡವು ಜಿಲ್ಲೆಯ ಪ್ರತಿಯೊಂದು ತಾಲೂಕು ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ, ಮುಖಂಡರು ಹಾಗೂ ಕಾರ್ಯಕರ್ತರ ಜತೆ ಸಮಾಲೋಚಿಸಿ ಅಭಿಪ್ರಾಯ ಸಂಗ್ರಹಿಸಿತ್ತು. ಕಾರ್ಯಕರ್ತರ ಒಲವು ಹಾಗೂ ಮುಖಂಡರ ಅಭಿಪ್ರಾಯವನ್ನು ಪರಿಗಣಿಸಿ ಇದೀಗ ಪದ್ಮರಾಜ್ ಅವರ ಹೆಗಲಿಗೆ ಜಿಲ್ಲಾ ಸಾರಥ್ಯವನ್ನು ವಹಿಸಲಾಗಿದೆ.ರಾಜ್ಯದ ಒಟ್ಟು 35 ಜಿಲ್ಲೆಗಳಿಗೂ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ. ಎಐಸಿಸಿ ಅಧ್ಯಕ್ಷರ ಅನುಮೋದನೆಯೊಂದಿಗೆ ಈ ನೇಮಕಾತಿ ನಡೆದಿದ್ದು, ಸೆಪ್ಟೆಂಬರ್ 9 ರಿಂದಲೇ ಈ ಆದೇಶ ಅಧಿಕೃತವಾಗಿ ಜಾರಿಗೆ ಬಂದಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading