ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪಿ.ಸಿ.ಬಿ ತಯಾರಿಕಾ ಕಾರ್ಯಾಗಾರ

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯ ಹಾಗೂ ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಉದ್ದೇಶದಿಂದ ಮೂರು ದಿನಗಳ ಪಿಸಿಬಿ ವಿನ್ಯಾಸ, ತಯಾರಿಕೆ ಮತ್ತು ಪರೀಕ್ಷಾ ಕಾರ್ಯಾಗಾರಕ್ಕೆ ಸೆ.10ರಂದು ಚಾಲನೆ ನೀಡಲಾಯಿತು.

. . . . . . . . .

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ಅವರು ಪ್ರಸ್ತುತ ತಾಂತ್ರಿಕ ಕ್ಷೇತ್ರದಲ್ಲಿ ಪ್ರಾಯೋಗಿಕ ಕೌಶಲ್ಯಗಳಿಗೆ ಹೆಚ್ಚಿನ ಮಹತ್ವವಿದ್ದು, ವಿದ್ಯಾರ್ಥಿಗಳು ತರಗತಿಯಲ್ಲಿ ಕಲಿತ ಪರಿಕಲ್ಪನೆಗಳನ್ನು ಪ್ರಾಯೋಗಿಕವಾಗಿ ಅನ್ವಯಿಸುವ ಮೂಲಕ ತಮ್ಮ ತಾಂತ್ರಿಕ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕೌಶಲ್ಯ ಪ್ರಯೋಗಾಲಯ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಈ ಕಾರ್ಯಾಗಾರದಲ್ಲಿ ಆರ್-ಲಾಜಿಕ್ ಟೆಕ್ನಾಲಜೀಸ್ ಸಂಸ್ಥೆಯ ರಾಕೇಶ್ ಮತ್ತು ಪವನ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.

. . . . . . .

ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ತಾವು ವಿನ್ಯಾಸಗೊಳಿಸಿದ ಸರ್ಕೂಟ್‌ಗಳನ್ನು ಪಿಸಿಬಿ ರೂಪಕ್ಕೆ ಪರಿವರ್ತಿಸುವುದು, ವಿನ್ಯಾಸದಲ್ಲಿನ ದೋಷಗಳನ್ನು ಗುರುತಿಸಿ ಸರಿಪಡಿಸುವುದು ಹಾಗೂ ಸಿದ್ಧಪಡಿಸಿದ ಪಿಸಿಬಿಗಳನ್ನು ಪರೀಕ್ಷಿಸಲು ಪ್ರಾಯೋಗಿಕ ಅನುಭವ ಪಡೆದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading