ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ “ನಾಟಕ ತರಬೇತಿ ಶಿಬಿರ”ದ ಉದ್ಘಾಟನಾ ಸಮಾರಂಭ ; ಶಿಬಿರವನ್ನು ಉದ್ಘಾಟಿಸಿದ ಖ್ಯಾತ ರಂಗ ನಿರ್ದೇಶಕ ಹಾಗೂ ತರಬೇತುದಾರರಾದ ಮಿಥುನ್ ಕುಮಾರ್ ಸೋನ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಕುಸುಮ ಸಾರಂಗ ರಂಗಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸಾಕೋಶ ಇವುಗಳ ಸಹಭಾಗಿತ್ವದಲ್ಲಿ ಸೆ.11ರಂದು ಪ್ರಸಕ್ತ ಸಾಲಿನ ನಾಟಕ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಿತು. ಖ್ಯಾತ ರಂಗ ನಿರ್ದೇಶಕ ಹಾಗೂ ತರಬೇತುದಾರರಾದ ಮಿಥುನ್ ಕುಮಾರ್ ಸೋನ ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿ ವಿದ್ಯಾರ್ಥಿ ಜೀವನದಲ್ಲಿ ರಂಗಭೂಮಿ ಹಾಗೂ ನಾಟಕದ ಮಹತ್ವ, ಅದರಿಂದ ವ್ಯಕ್ತಿತ್ವ ವಿಕಾಸಕ್ಕೆ ಆಗುವ ಲಾಭಗಳ ಕುರಿತು ಮಾತನಾಡಿದರು. ಕಾಲೇಜಿನ ಐಕ್ಯೂಎಸಿ ಸಂಯೋಜಕರಾದ ಶ್ರೀಮತಿ ಶ್ರೀಲತಾ ಕಮಿಲರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್.ಪಿ.ಟಿ ರವರು ವಿದ್ಯಾರ್ಥಿಗಳಿಗೆ ಅಮೂಲ್ಯವಾದ ಸಲಹೆ-ಸೂಚನೆಗಳನ್ನು ನೀಡಿ ರಂಗ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಕುಸುಮ ಸಾರಂಗ ರಂಗ ಘಟಕದ ವಿದ್ಯಾರ್ಥಿ ನಾಯಕರುಗಳಾದ ಅಶ್ವಥ್ ತೃತೀಯ ಬಿ.ಎ ಹಾಗೂ ಸಂಗೀತ ತೃತೀಯ ಬಿ.ಎ ಉಪಸ್ಥಿತರಿದ್ದರು. ಕುಸುಮ ಸಾರಂಗ ರಂಗಘಟಕದ ಸಂಯೋಜಕರಾದ ಡಾ. ಪ್ರಸಾದ್.ಎನ್ ಪ್ರಾಸ್ತಾವಿಕ ಮಾತುಗಳನ್ನಾಡಿ ಎಲ್ಲರನ್ನೂ ಸ್ವಾಗತಿಸಿದರು. ರಂಗಘಟಕದ ಸಹ-ಸಂಯೋಜಕರಾದ ಶ್ರೀಮತಿ ಕೃತಿಕಾ.ಪಿ.ಎಸ್ ಧನ್ಯವಾದ ಸಮರ್ಪಿಸಿದರು. ತೃತೀಯ ಬಿ.ಕಾಂ ವಿದ್ಯಾರ್ಥಿ ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading