ಸೆ.20ರಂದು ಗುತ್ತಿಗಾರು ವಲಯದ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ – ಇಂದು ಆಮಂತ್ರಣ ಪತ್ರಿಕೆ ಬಿಡುಗಡೆ

ಗುತ್ತಿಗಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನ ಪ್ರಗತಿಬಂಧು–ಸ್ವಸಹಾಯ ಸಂಘಗಳ ಒಕ್ಕೂಟ, ಗುತ್ತಿಗಾರು ವಲಯದ ಆಶ್ರಯದಲ್ಲಿ ವಿವಿಧ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೆ.20ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.

. . . . . . . . .

ಗುತ್ತಿಗಾರು, ವಳಲಂಬೆ, ಕಮಿಲ–ಮೊಗ್ರ–ಬಳ್ಳಕ್ಕ, ಮಾವಿನಕಟ್ಟಿ, ದೇವ, ನಡುಗಲ್ಲು, ಹಾಲೆಮಜಲು, ಮೆಟ್ಟಿನಡ್ಕ, ಕಂದ್ರಪ್ಪಾಡಿ ಹಾಗೂ ಮಡಪ್ಪಾಡಿ ಪ್ರಗತಿಬಂಧು–ಸ್ವಸಹಾಯ ಸಂಘಗಳ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಲಿದೆ.ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸೆ.12ರಂದು ಬಿಡುಗಡೆ ಮಾಡಲಾಯಿತು.

. . . . . . .

ಈ ಸಂದರ್ಭದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಟಿ.ಎನ್. ಸತೀಶ್, ವಲಯ ಭಜನಾ ಪರಿಷತ್ತಿನ ಅಧ್ಯಕ್ಷ ಪೂರ್ಣಚಂದ್ರ ಪೈಕ, ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯ ವಿಜಯಕುಮಾರ್ ಚಾರ್ಮತ, ವಲಯ ಮೇಲ್ವಿಚಾರಕ ರಾಜೇಶ್, ವಲಯದ ಸೇವಾ ಪ್ರತಿನಿಧಿಗಳು, ಒಕ್ಕೂಟಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading