ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಸೈಂಟ್ ಜೋಸೆಫ್ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಸುಳ್ಯ: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸುಳ್ಯದ ಕೆ.ಪಿ.ಎಸ್. ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕರ ಯೋಗ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

. . . . . . . . .

ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಅಕ್ಷರ್ ಅವರು ಟ್ರೆಡಿಷನಲ್ ಸಿಂಗಲ್ಸ್, ಆರ್ಟಿಸ್ಟಿಕ್ ಡಬಲ್ಸ್ ಹಾಗೂ ರಿದಮಿಕ್ ಡಬಲ್ಸ್ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಆರನೇ ತರಗತಿಯ ಶ್ರೀಶಾಂತ್ ಅವರು ಆರ್ಟಿಸ್ಟಿಕ್ ಡಬಲ್ಸ್ ಹಾಗೂ ರಿದಮಿಕ್ ಡಬಲ್ಸ್ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

. . . . . . .

ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಜೊತೆ ಕಾರ್ಯದರ್ಶಿ ರೆ. ಫಾ. ಓಲ್ವಿನ್ ಡಿ’ಕುನ್ಹ ಹಾಗೂ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ಮಾರ್ಗದರ್ಶನ ನೀಡಿದರು. ಸಂತೋಷ ಮುಂಡಕಜೆ ಹಾಗೂ ಪ್ರಶ್ವಿಜ ಅವರು ಯೋಗ ತರಬೇತಿ ನೀಡಿದ್ದು, ದೈಹಿಕ ಶಿಕ್ಷಣ ಶಿಕ್ಷಕರಾದ ಪುಷ್ಪವೇಣಿ ಹುದೇರಿ ಹಾಗೂ ಕೊರಗಪ್ಪ ಬೆಳ್ಳಾರೆ ಸಹಕರಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading