ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಆಗ್ರಹಿಸಿ ಸೆ.16ರಂದು ಗ್ರಾಮ ಪಂಚಾಯತ್ ಗಳ ಎದುರು ಧರಣಿ

ಸುಳ್ಯ: ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸುವಂತೆ ಹಾಗೂ ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಗಳ ನಡುವೆ ಸ್ಪಷ್ಟ ಗಡಿ ಗುರುತಿಸಿ ಶೂನ್ಯ (0) ಬಫರ್‌ಝೋನ್ ಘೋಷಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಗಳ ಎದುರು ಸೆ.16ರಂದು ಧರಣಿ ಸತ್ಯಾಗ್ರಹ ನಡೆಸಲು ಮಲೆನಾಡು ಜನಹಿತ ರಕ್ಷಣಾ ವೇದಿಕೆ ಕರೆ ನೀಡಿದೆ.

. . . . . . . . .

ಸೆ.16ರಂದು ಬೆಳಿಗ್ಗೆ 10ರಿಂದ 11 ಗಂಟೆಯವರೆಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕಾರ್ಯಕರ್ತರು ಹಾಗೂ ಗ್ರಾಮದ ರೈತರು ಪಕ್ಷಾತೀತವಾಗಿ, ಜಾತ್ಯತೀತವಾಗಿ ಧರಣಿ ನಡೆಸಬೇಕು ಎಂದು ವೇದಿಕೆಯ ಕಿಶೋರ್ ಶಿರಾಡಿ ತಿಳಿಸಿದ್ದಾರೆ.

. . . . . . .

ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯ ಕುರಿತು ಮೊದಲ ಆದ್ಯತೆಯಲ್ಲಿ ಚರ್ಚಿಸಿ ವರದಿಯನ್ನು ತಿರಸ್ಕರಿಸುವ ನಿರ್ಣಯ ಕೈಗೊಳ್ಳಬೇಕು. ಅಲ್ಲದೆ, ಪಶ್ಚಿಮ ಘಟ್ಟ ಹಾಗೂ ಜನವಸತಿ ಪ್ರದೇಶಗಳಿಗೆ ಸ್ಪಷ್ಟ ಗಡಿ ಗುರುತಿಸಿ ಶೂನ್ಯ ಬಫರ್‌ಝೋನ್ ಘೋಷಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪಶ್ಚಿಮ ಘಟ್ಟದ ಗಡಿ ಮತ್ತು ಜನವಸತಿ ಪ್ರದೇಶಗಳ ನಡುವಿನ ಸ್ಪಷ್ಟತೆಯಿಂದಾಗಿ ಕಾಡುಪ್ರಾಣಿಗಳಿಂದ ರೈತರು ಹಾಗೂ ಕೃಷಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ಕಡಿಮೆ ಮಾಡಲು ಸಾಧ್ಯವಾಗಲಿದೆ. ಊರು ಹಾಗೂ ಕೃಷಿ ಪ್ರದೇಶಗಳಿಗೆ ಆಗಮಿಸುವ ಕಾಡುಪ್ರಾಣಿಗಳನ್ನು ಮತ್ತೆ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಕ್ಕೆ ಕಳುಹಿಸಲು ಸೂಕ್ತ ಕ್ರಮ ಕೈಗೊಳ್ಳುವಂತಾಗಬೇಕು ಎಂದು ವೇದಿಕೆ ಆಗ್ರಹಿಸಿದೆ.

ಧರಣಿ ಬಳಿಕ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಮೂಲಕ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ತಲುಪಿಸುವಂತೆ ಕಿಶೋರ್ ಶಿರಾಡಿ ಮನವಿ ಮಾಡಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading