“ಸುಳ್ಯ ಪಟ್ಟಣ ಪಂಚಾಯತ್‌ನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಮನವಿ ಮಾಡಲಾಗುವುದು” | ದ.ಕ ಜಿಲ್ಲೆಯಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ | ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

“ಜಿಲ್ಲೆಯಲ್ಲಿ ಸೌಹಾರ್ದತೆ ಹಾಗೂ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇಶದ ವಿವಿಧ ಭಾಗಗಳಿಂದ ಜನರು ಆಗಮಿಸುವಂತಹ ಪವಿತ್ರ ಕ್ಷೇತ್ರಗಳಿದ್ದು, ಜಿಲ್ಲೆಗೆ ಹೊರಗಿನವರು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತಾಗಬೇಕು. ಜಿಲ್ಲೆಯ ಪ್ರಮುಖ ಕೇಂದ್ರಗಳು ಜನಾಕರ್ಷಣೆಯ ತಾಣಗಳಾಗಿ ಅಭಿವೃದ್ಧಿಯಾಗಬೇಕು” ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದರು. ಸುಳ್ಯದ ಪತ್ರಿಕಾಭವನದಲ್ಲಿ ಸೆ.16ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸೆ.18ರಂದು ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ(ಪ್ರಜಾಸೌಧ)ದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಚಾರಗಳಿಗೆ ಆದ್ಯತೆ ದೊರೆಯುವಂತೆ ಸಭೆಯಲ್ಲಿ ಚರ್ಚಿಸಲಾಗುವುದು” ಎಂದು ಹೇಳಿದರು.

. . . . . . . . .

ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, “ಸುಳ್ಯ ಪಟ್ಟಣ ಪಂಚಾಯತ್‌ನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಸಭೆಯಲ್ಲಿ ಮನವಿ ಮಾಡಲಾಗುವುದು. ಸುಳ್ಯದಲ್ಲಿ ರಬ್ಬರ್ ಕಾರ್ಖಾನೆ ನಿರ್ಮಾಣ, ಸಮರ್ಪಕ ವಿದ್ಯುತ್ ಸರಬರಾಜು ಹಾಗೂ ಅಗತ್ಯವಿರುವವರಿಗೆ ಬಂದೂಕು ಪರವಾನಗಿ ನೀಡುವ ವಿಚಾರಗಳ ಬಗ್ಗೆಯೂ ಸರ್ಕಾರ ಗಮನ ಹರಿಸುವಂತೆ ಆಗ್ರಹಿಸಲಾಗುವುದು” ಎಂದರು. “ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ನಿಗಾ ವಹಿಸಲಾಗುವುದು” ಎಂದು ಅವರು ತಿಳಿಸಿದರು.

. . . . . . .

ಸುದ್ದಿಗೋಷ್ಠಿಯಲ್ಲಿ ನ.ಪಂ. ಮಾಜಿ ಅಧ್ಯಕ್ಷ ಸಂಶುದ್ದೀನ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಆಡಳಿತ) ಭವಾನಿಶಂಕರ್ ಕಲ್ಮಡ್ಕ, ಸೂಡಾ ಅಧ್ಯಕ್ಷ ಕೆ.ಎಂ. ಮುಸ್ತಫಾ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುರೇಶ್ ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading