- Friday
- September 18th, 2026
ಸುಳ್ಯದಲ್ಲಿ ಟೈಲರಿಂಗ್ ಹಾಗೂ ಎಂಬ್ರಾಯಿಡರಿ ಕೆಲಸದಲ್ಲಿ ನುರಿತ, ಅನುಭವ ಹೊಂದಿರುವ ಅಭ್ಯರ್ಥಿಗಳು ಬೇಕಾಗಿದ್ದಾರೆ. ಉಡುಪುಗಳು, ಬ್ಲೌಸ್‌ಗಳು, ಸೂಟ್‌ಗಳು ಸೇರಿದಂತೆ ವಿವಿಧ ರೀತಿಯ ಉಡುಪುಗಳ ತಯಾರಿಕೆಯಲ್ಲಿ ಕೌಶಲ್ಯ ಹಾಗೂ ಪರಿಣತಿ ಹೊಂದಿರುವ ಸ್ಥಳೀಯ ಪುರುಷ / ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಮೊ: 7259118916
ಶಾಲಾ ಶಿಕ್ಷಣ ಇಲಾಖೆ(ಪಪೂ) ಮತ್ತು ಬದ್ರಿಯಾ ಪಿಯು ಕಾಲೇಜು ಮಂಗಳೂರು ಇದರ ಸಹಯೋಗದಲ್ಲಿ ನಡೆದ ದಕ ಜಿಲ್ಲಾ ಮಟ್ಟದ ಪಪೂ ಬಾಲಕರ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ಪ್ರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸಂತೋಷ್ ಕೆ.ಎಸ್ 155 ಕೆಜಿ ಕೆಟಗರಿ ವಿಭಾಗದಲ್ಲಿ ದ್ವಿತೀಯ, ಜೀವನ್ ಎನ್.ಆರ್ 140 ಕೆಜಿ...
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಇಂಜಿನಿಯರ್ಸ್ ಡೇ ಅಂಗವಾಗಿ ತಾಲೂಕಿನ ಹಿರಿಯ ಇಂಜಿನಿಯರ್ ಸೂರ್ಯರಾಯ್ ಹೊಸಮನೆ ಅವರನ್ನು ಕ್ಲಬ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ನಿರ್ವಹಣೆಯನ್ನು ರೋಟರಿಯನ್ ಪ್ರಭಾಕರ್ ಆಳ್ವ ಭಜನಿ ಅವರು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಜೋನಲ್ ಲೆಫ್ಟಿನೆಂಟ್ ರೋಟರಿಯನ್ ಚಂದ್ರಶೇಖರ್ ರೈ ಬಜನಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೋಟರಿ ಕ್ಲಬ್ ಬೆಳ್ಳಾರೆ ಟೌನ್...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 17 ಸೆಪ್ಟೆಂಬರ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 17) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಅಖಿಲ ಭಾರತ ಒಕ್ಕಲಿಗರ ಮಹಾಸಭಾ ಮತ್ತು ಒಕ್ಕಲಿಗರ ಪರಿಷತ್ತು, ಹಾಗೂ ಕೃಷ್ಣಪ್ಪ ರಂಗಮ್ಮ ಸಮಾಜ ಸೇವಾ ಪ್ರತಿಷ್ಠಾನ ಇವರ ಆಶ್ರಯದಲ್ಲಿ ನಡೆಯುವ ರಾಜ್ಯಮಟ್ಟದ ಒಕ್ಕಲಿಗ ಹಾಗೂ ಅದರ 116 ಜಾತಿ-ಉಪಜಾತಿಗಳ ಸ್ನೇಹ ಮಿಲನ-ಅಭಿನಂದನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಾಳಿಕಾ ಪ್ರಸಾದ್ ಮುಂಡೋಡಿ ರಾಜ್ಯಮಟ್ಟದ "ಧಾರ್ಮಿಕ ಸೇವಾ ರತ್ನ" ಪ್ರಶಸ್ತಿಗೆ ನೀಡಿ ಗೌರವಿಸಲಿದ್ದಾರೆ. ಸೆ. 27 ರಂದು...
ಸುಬ್ರಹ್ಮಣ್ಯ ಸೆಪ್ಟಂಬರ್ 16 :“ ದಕ್ಷಿಣ ಕನ್ನಡ ಜಿಲ್ಲೆಯ ಮುಖ್ಯ ಸಮಸ್ಯೆಯಾದ ಪರಿಸರ ಸೂಕ್ಷ್ಮ ವಲಯದ(ಇಎಸ್ಎ )7ನೇ ಕರಡು ಅಧಿಸೂಚನೆಯ ಕುರಿತು ಸೆಪ್ಟಂಬರ್ 18ರಂದು ಮಂಗಳೂರಿನಲ್ಲಿ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಥಮವಾಗಿ ಚರ್ಚೆ ನಡೆಸಿ ಸಂಪೂರ್ಣವಾಗಿ ಕೈ ಬಿಡಬೇಕು ಮತ್ತು ಜನವಸತಿ ಪ್ರದೇಶಕ್ಕೆ ಹಾಗೂ ಪಶ್ಚಿಮ ಘಟ್ಟಕ್ಕೂ ಗಡಿ ಗುರುತು ಮಾಡಿ ಶೂನ್ಯ...
“ಜಿಲ್ಲೆಯಲ್ಲಿ ಸೌಹಾರ್ದತೆ ಹಾಗೂ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇಶದ ವಿವಿಧ ಭಾಗಗಳಿಂದ ಜನರು ಆಗಮಿಸುವಂತಹ ಪವಿತ್ರ ಕ್ಷೇತ್ರಗಳಿದ್ದು, ಜಿಲ್ಲೆಗೆ ಹೊರಗಿನವರು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತಾಗಬೇಕು. ಜಿಲ್ಲೆಯ ಪ್ರಮುಖ ಕೇಂದ್ರಗಳು ಜನಾಕರ್ಷಣೆಯ ತಾಣಗಳಾಗಿ ಅಭಿವೃದ್ಧಿಯಾಗಬೇಕು” ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದರು. ಸುಳ್ಯದ ಪತ್ರಿಕಾಭವನದಲ್ಲಿ ಸೆ.16ರಂದು...
ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯ ಕಾಲೇಜಿನ ಎನ್.ಎಸ್.ಎಸ್. ಹಾಗೂ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ತಂಡದ ಸಹಯೋಗದೊಂದಿಗೆ ‘ಇಂಜಿನಿಯರ್ಸ್ ಡೇ’ ಕಾರ್ಯಕ್ರಮವನ್ನು ಸೆ.15ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸೈಂಟ್ ಮೇರಿಸ್ ಇಂಡಸ್ಟೀಸ್‌ನ ಸಂಸ್ಥಾಪಕ ಇಂಜಿನಿಯರ್ ಜೆಮಿನ್ ಜೋಸೆಫ್ ಮಾತನಾಡಿ “ಸೆ.15ರಂದು ಭಾರತ ರತ್ನ ಸರ್.ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನದ ಅಂಗವಾಗಿ ಇಂಜಿನಿಯರ್ಸ್ ಡೇ ಆಚರಿಸಲಾಗುತ್ತದೆ....
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಚೊಕ್ಕಾಡಿ ವಿದ್ಯಾಸಂಸ್ಥೆಯಲ್ಲಿ ವಿವಿಧ ಕೊಡುಗೆ, ತರಬೇತಿ ಕಾರ್ಯಕ್ರಮ ಹಾಗೂ ವನಮಹೋತ್ಸವ ಕಾರ್ಯಕ್ರಮ ಸೆ. 12 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷರಾದ ರೋಟರಿಯನ್ ಆರಿಫ್ ಬೆಳ್ಳಾರೆ ವಹಿಸಿದ್ದರು. ವೇದಿಕೆಯಲ್ಲಿ ಜೋನಲ್ ಲೆಫ್ಟಿನೆಂಟ್ ಚಂದ್ರಶೇಖರ್ ರೈ, ಭಜನಿ ಚೊಕಾಡಿ ಎಜುಕೇಶನ್ ಸೊಸೈಟಿ ಅಧ್ಯಕ್ಷರಾದ ನಿರಂಜನ್...
