ಅರಂತೋಡು ಗ್ರಾ.ಪಂ. ವ್ಯಾಪ್ತಿಯಲ್ಲಿ ₹78.5 ಲಕ್ಷದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ

ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು ₹78.5 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು.

. . . . . . . . .

ತೊಡಿಕಾನ–ಕುಂಟುಕಾಡು ರಸ್ತೆ ₹15.5 ಲಕ್ಷ, ತೊಡಿಕಾನ–ಚಿಟ್ಟನೂರು ರಸ್ತೆ ₹10 ಲಕ್ಷ, ಬಾಳೆಕಜೆ–ಹರ್ಲಡ್ಕ ರಸ್ತೆ ₹5.5 ಲಕ್ಷ, ತೊಡಿಕಾನ ಪಾಷಾಣಮೂರ್ತಿ ಸಂಪರ್ಕ ರಸ್ತೆ ₹7 ಲಕ್ಷ, ನಾಗನಮೂಲೆ–ಬಾಳೆಕಜೆ ರಸ್ತೆ – ₹5.5 ಲಕ್ಷ, ಪಂಜಿಕೋಡಿ–ನಾಗನಮೂಲೆ ರಸ್ತೆ ₹5 ಲಕ್ಷ, ಕಾಡುಪಂಜ–ಊರುಪಂಜ ರಸ್ತೆ ₹10 ಲಕ್ಷ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯಲಿದೆ.

. . . . . . .

ಈ ಸಂದರ್ಭದಲ್ಲಿ ಪಕ್ಷದ ಮಂಡಲ ಸಮಿತಿ ಕಾರ್ಯದರ್ಶಿ ಭಾರತಿ ಉಳುವಾರು, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ಕಾರ್ಯದರ್ಶಿ ಸತೀಶ್ ನಾಯ್ಕ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಆಡ್ತಲೆ, ಅರಂತೋಡು ಸೊಸೈಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಶಕ್ತಿಕೇಂದ್ರ ಪ್ರಮುಖರಾದ ಚಂದ್ರಶೇಖರ್, ರೋಹಿತ್ ಸೇರಿದಂತೆ ಹಲವಾರು ಕಾರ್ಯಕರ್ತರು ಹಾಗೂ ರಸ್ತೆಯ ಫಲಾನುಭವಿಗಳು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading